ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಂಡಿದ್ದು, 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 34,264,01 ರೈತರಿಗೆ 685.28 ಕೋಟಿ ರೂ.ಗಳನ್ನು ರೈತರಿಗೆ ತಲಾ 2 ಸಾವಿರ ರೂ.ಗಳಂತೆ ಬಿಡುಗಡೆಯಾಗಿದೆ.
Advertisement
2018-19 ರಿಂದ ಜ.1, 2022 ರವರೆಗೆ 10ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52 ಸಾವಿರ ರೈತ ಕುಟುಂಬಗಳಿಗೆ ಒಟ್ಟು 8,707 ಕೋಟಿ, 97ಲಕ್ಷ ರೂ. ಬಿಡುಗಡೆಯಾದಂತಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ 10ಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರಿಗೆ ಕೊರೊನಾ ದೃಢ
Advertisement
Advertisement
ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕಳೆದ 2019 ಫೆ.1ರಿಂದ ಅನುಷ್ಠಾನಗೊಳಿಸಿದ್ದು, ಯೋಜನೆಯಡಿ ವಾರ್ಷಿಕ ರೂ 6,000 ರೂ.ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಈ ಅನುದಾನವನ್ನು 2,000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ಇದನ್ನು ನೀಡಲಾಗುತ್ತಿದೆ. 2,850 ಕೋಟಿ 54 ಲಕ್ಷ ರೂ.ಗಳಷ್ಟು ಕರ್ನಾಟಕ ಸರ್ಕಾರದಿಂದ ಹೆಚ್ಚುವರಿಯಾಗಿ ರೈತರಿಗೆ ಹಣ ಪಾವತಿಯಾಗಿದೆ. ಇದನ್ನೂ ಓದಿ: ಜ್ವರ, ಕೆಮ್ಮು, ತಲೆನೋವು ಇದ್ದರೂ ಕೋವಿಡ್ ಟೆಸ್ಟ್ ಮಾಡಿಸಿ: ಕೇಂದ್ರ ಸೂಚನೆ
Advertisement
ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಬೇಕೆಂದು ಸೂಚಿಸಲಾಗಿದ್ದು, ಎಲ್ಲಾ ರಾಜ್ಯಗಳ ಪೈಕಿ, ಕರ್ನಾಟಕ ರಾಜ್ಯವು ಅತಿ ಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ 2021ರ ವರ್ಷದ ಫೆಬ್ರವರಿಯಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಸಹ ದೊರೆತಿದೆ. ನಿರಂತರ ಮೇಲ್ವಿಚಾರಣೆಯ ಭಾಗವಾಗಿ ಯೋಜನೆಯ ಫಲಾನುಭವಿಗಳಾಗಿರುವ ರೈತ ಕುಟುಂಬಗಳ ಅರ್ಹತೆಯನ್ನು ರಾಜ್ಯದಿಂದ ಸರಿಯಾಗಿ ಪರಿಶೀಲಿಸಲಾಗುತ್ತಿದೆ.