ಭೋಪಾಲ್: 2024 ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ನೇತೃತ್ವದ ಎನ್‌ಡಿಎಗೆ 400ಕ್ಕೂ ಮೀರಿದ ಸೀಟುಗಳು ಯಾಕೆ ಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ (narendra Modi) ಬಯಲು ಮಾಡಿದ್ದಾರೆ.
ಮಧ್ಯಪ್ರದೇಶದ ಧಾರ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಬಯಸುತ್ತಿದೆ. ಹೀಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ ಪಕ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರಳಿತರುವುದನ್ನು ತಡೆಯಬಹುದು. ಅಲ್ಲದೇ ಅಯೋಧ್ಯೆಯ ರಾಮ ಮಂದಿರಕ್ಕೆ (Aayodhya Ram Mandir) ಬಾಬರಿ ಲಾಕ್ ಹಾಕುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳನ್ನು ಕಾಂಗ್ರೆಸ್ (Congress) ಕಡೆಗಣಿಸುತ್ತಿದೆ. ಕಾಂಗ್ರೆಸ್ ಪರಿವಾರವು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ತೀವ್ರವಾಗಿ ದ್ವೇಷಿಸುತ್ತದೆ. ವಿರೋಧ ಪಕ್ಷವು ಸಂವಿಧಾನವನ್ನು ರಚಿಸುವಲ್ಲಿ ಅವರ ಕನಿಷ್ಠ ಪಾಲ್ಗೊಳ್ಳುವಿಕೆಯನ್ನು ಪ್ರತಿಪಾದಿಸಲು ಪ್ರಾರಂಭಿಸಿದೆ ಎಂದು ಆರೋಪಿಸಿದರು. 400 ಲೋಕಸಭಾ ಸ್ಥಾನಗಳನ್ನು ಪಡೆದರೆ ಅವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂದು ಕಾಂಗ್ರೆಸ್ ವದಂತಿಗಳನ್ನು ಹರಡುತ್ತಿದೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಎನ್‌ಡಿಎ ಈಗಾಗಲೇ ಸಂಸತ್ತಿನಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳುವುದು ಬಹಳ ಮುಖ್ಯ. ನಾವು ಈ ಸಂಖ್ಯೆಯನ್ನು 370 ನೇ ವಿಧಿಯನ್ನು (ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸಿದ) ರದ್ದುಗೊಳಿಸಲು ಬಳಸಿದ್ದೇವೆ ಎಂದು ಮೋದಿ ತಿಳಿಸಿದರು. ಇದನ್ನೂ ಓದಿ: ಕಾಡಿನಲ್ಲಿ ಇರೋದು ಒಬ್ಬನೇ ವ್ಯಕ್ತಿ – ಕೇವಲ ಒಂದೇ ವೋಟ್‌ನಿಂದ 100% ಮತದಾನ