ಆರ್ಥಿಕ ಸುಧಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನ ಕದ್ದೊಯ್ದು ಓದಲಿ: ಮೋದಿಗೆ ರಾಹುಲ್ ಗಾಂಧಿ ಟಾಂಗ್

Public TV
2 Min Read
modi rahul gandhi 2

ನವದೆಹಲಿ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತಕ್ಕೆ ಪರಿಹಾರ ಹುಡುಕುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ಕದ್ದೊಯ್ಯಲಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾರತವು ಸಂಕಷ್ಟದಲ್ಲಿದೆ ಹಾಗೂ ಆರ್ಥಿಕತೆ ಹಳಿ ತಪ್ಪಿದೆ. ಕೇಂದ್ರ ಸರ್ಕಾರದ ಸುಳಿವು ಸಿಗುತ್ತಿಲ್ಲ. ಹೀಗಾದರೆ ಏನು ಮಾಡಬೇಕು? ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಅವಶ್ಯವಾಗಿ ಬೇಕಾದ ಯೋಜನೆಗಳು, ಪರಿಹಾರಗಳು ಕಾಂಗ್ರೆಸ್ ಪ್ರಣಾಳಿಕೆಯಲ್ಲಿವೆ. ಅದನ್ನು ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಕದ್ದೊಯ್ದು ಓದಬೇಕು ಎಂದು ವ್ಯಂಗ್ಯಾವಾಡಿದ್ದಾರೆ. ಇದನ್ನೂ ಓದಿ: ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ರಾಹುಲ್ ಗಾಂಧಿ

ಹರ್ಯಾಣದ ಮಹೇಂದ್ರಘರ್ ನಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ತಿಳುವಳಿಕೆ ಇಲ್ಲ. 2014ರ ನಂತರ ಯುಎಸ್‍ನ 2-3 ಪ್ರಸಿದ್ಧ ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದೆ. 2004-2014ರ ಅವಧಿಯಲ್ಲಿ ಭಾರತದ ಆರ್ಥಿಕತೆಯ ವೇಗದ ಬೆಳವಣಿಗೆಗೆ ಕಾರಣ ಮನ್ರೆಗಾ (ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಹಾಗೂ ಕೃಷಿ ಸಾಲ ಮನ್ನಾ ಎಂದು ಅವರು ನನಗೆ ಮನವರಿಕೆ ಮಾಡಿದರು ಹೇಳಿದ್ದರು. ಇದನ್ನೂ ಓದಿ: ಆರ್ಥಿಕತೆ ಸರಿಪಡಿಸಲು ವಿಪಕ್ಷಗಳನ್ನ ದೂಷಿಸಿದ್ರೆ ಸಾಕಾಗಲ್ಲ: ಸೀತಾರಾಮನ್‍ಗೆ ಸಿಂಗ್ ತಿರುಗೇಟು

ಇತ್ತ ಆರ್ಥಿಕ ಕುಸಿತದ ವಿಚಾರವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ ವಿಭಾಗ ಭಾರತದ ಆರ್ಥಿಕ ನೀತಿ ವಿಚಾರದ ಬಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದ್ದರು. ಈ ವೇಳೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವಧಿಯಲ್ಲಿ ಬ್ಯಾಂಕ್‍ಗಳು ದುಸ್ಥಿತಿಗೆ ತಲುಪಿದ್ದವು. ಈಗ ನಮ್ಮ ಸರ್ಕಾರ ಬ್ಯಾಂಕ್‍ಗಳಿಗೆ ಜೀವ ನೀಡಿ ಹೊಸ ಚೈತನ್ಯ ನೀಡುತ್ತಿದೆ ಎಂದು ತಿಳಿಸಿದ್ದರು.

manmohan singhcSitharaman

ನಿರ್ಮಲಾ ಸೀತಾರಾಮನ್ ಆರೋಪಕ್ಕೆ ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ ಮನಮೋಹನ್ ಸಿಂಗ್, ವಿತ್ತ ಸಚಿವರ ಹೇಳಿಕೆಗಳನ್ನು ನಾನು ನೋಡಿದ್ದೇನೆ. ಆ ವಿಚಾರವಾಗಿ ಟೀಕೆ ಮಾಡಲು ಇಷ್ಟಪಡುವುದಿಲ್ಲ. ಆದರೆ ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಸಮಸ್ಯೆಗೆ ಪರಿಹಾರ ಹುಡುಕುವುದರ ಬದಲು ವಿಪಕ್ಷಗಳ ವಿರುದ್ಧ ಆರೋಪ ಮಾಡುತ್ತಿದೆ. ಇದರಿಂದ ದೇಶದ ಆರ್ಥಿಕತೆಯ ಸುಧಾರಣೆ ಆಗುವುದಿಲ್ಲ ಎಂದು ಕುಟುಕಿದ್ದರು.

Share This Article
Leave a Comment

Leave a Reply

Your email address will not be published. Required fields are marked *