ನವದೆಹಲಿ: ಅನುಪ್ ಚಂದ್ರ ಪಾಂಡೆ (Anup Chandra Pandey) ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ (Arun Goel) ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಮಾರ್ಚ್ 15 ರೊಳಗೆ ಇಬ್ಬರು ಚುನಾವಣಾ ಆಯುಕ್ತರನ್ನು (Election Commissioners) ನೇಮಿಸುವ ಸಾಧ್ಯತೆಯಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
ಚುನಾವಣಾ ಸಮಿತಿಯು ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಮೊದಲೇ, ಗೋಯೆಲ್ ಅವರು ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಶನಿವಾರ ಅಂಗೀಕರಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ
Advertisement
Advertisement
ಇದರಿಂದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಚುನಾವಣಾ ಪ್ರಾಧಿಕಾರದ ಏಕೈಕ ಸದಸ್ಯರಾಗಿ ಉಳಿದಿದ್ದಾರೆ. ಪಾಂಡೆ ಅವರು ಫೆಬ್ರವರಿ 14 ರಂದು 65 ವರ್ಷಗಳನ್ನು ಪೂರೈಸಿದ ನಂತರ ನಿವೃತ್ತಿ ಹೊಂದಿದ್ದರು.
Advertisement
ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರ ನೇತೃತ್ವದಲ್ಲಿ ಗೃಹ ಕಾರ್ಯದರ್ಶಿ ಮತ್ತು ಸಿಬ್ಬಂದಿ ಹಾಗೂ ತರಬೇತಿ ಇಲಾಖೆ (ಡಿಒಪಿಟಿ) ಕಾರ್ಯದರ್ಶಿಯನ್ನು ಒಳಗೊಂಡ ಶೋಧನಾ ಸಮಿತಿಯು ಮೊದಲಿಗೆ ಈ ಎರಡು ಹುದ್ದೆಗಳಿಗೆ ತಲಾ ಐದು ಹೆಸರುಗಳ ಎರಡು ಪ್ರತ್ಯೇಕ ಫಲಕಗಳನ್ನು ಸಿದ್ಧಪಡಿಸುತ್ತದೆ. ಇದನ್ನೂ ಓದಿ: ಸೋಮವಾರವೇ ಬಿಜೆಪಿಯ 2ನೇ ಪಟ್ಟಿ ರಿಲೀಸ್? – ರಾಜ್ಯದ 15 ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
Advertisement
ನಂತರ ಪ್ರಧಾನಿ ನೇತೃತ್ವದ ಮತ್ತು ಕೇಂದ್ರ ಸಚಿವ ಹಾಗೂ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಚುನಾವಣಾ ಆಯುಕ್ತರ ನೇಮಕಕ್ಕಾಗಿ ಇಬ್ಬರನ್ನು ಹೆಸರಿಸಲಿದೆ. ಬಳಿಕ ಚುನಾವಣಾ ಆಯುಕ್ತರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ.
ಆಯ್ಕೆ ಸಮಿತಿಯು ಸದಸ್ಯರ ಅನುಕೂಲಕ್ಕೆ ಅನುಗುಣವಾಗಿ ಮಾರ್ಚ್ 13 ಅಥವಾ 14 ರಂದು ಸಭೆ ನಡೆಸಬಹುದು. ಮಾರ್ಚ್ 15 ರೊಳಗೆ ನೇಮಕಾತಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಂಸದ ಬ್ರಿಜೇಂದ್ರ ಸಿಂಗ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ