ಧಾರವಾಡ: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು (Vande Bharat Express Train) ಬರುತ್ತಿದೆ. ಮಂಗಳವಾರದಿಂದ ಧಾರವಾಡ-ಬೆಂಗಳೂರು (Dharwad – Bengaluru) ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಬೆಳಗ್ಗೆ 9 ಗಂಟೆಗೆ ವರ್ಚುವಲ್ ಆಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ವಂದೇ ಭಾರತ್ ರೈಲಿಗೆ ಮಂಗಳವಾರ ಬೆಳಗ್ಗೆ 9 ಗಂಟೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ. ಧಾರವಾಡ ರೈಲ್ವೆ ನಿಲ್ದಾಣದಿಂದ ಜೋಶಿ ಚಾಲನೆ ನೀಡಿದರೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ ನೀಡಲಿದ್ದಾರೆ.
Advertisement
Advertisement
ಇಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ರೈಲುಗಳು ಹಳಿಯೇರಲಿವೆ. ಮಧ್ಯಪ್ರದೇಶದಲ್ಲಿ 2 ರೈಲುಗಳು, ಕರ್ನಾಟಕ, ಬಿಹಾರ, ಹಾಗೂ ಗೋವಾದಲ್ಲಿ ಒಂದೊಂದು ರೈಲಿಗೆ ಚಾಲನೆ ಸಿಗಲಿದೆ. ಈ ಮೂಲಕ ರೈಲುಗಳ ಸಂಖ್ಯೆ 24ಕ್ಕೆ ಏರಲಿದೆ. ಕರ್ನಾಟಕಕ್ಕೆ ಇದು 2ನೇ ರೈಲಾಗಲಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಸುಮಾರು 490 ಕಿ.ಮೀ ದೂರವನ್ನು 6 ಗಂಟೆ 13 ನಿಮಿಷಗಳಲ್ಲಿ ಈ ರೈಲು ಕ್ರಮಿಸಲಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಇನ್ನೆರಡು ದಿನದಲ್ಲಿ ಆದೇಶ
Advertisement
Advertisement
ಪ್ರತಿ ದಿನ ಬೆಂಗಳೂರು-ಧಾರವಾಡ ನಡುವೆ ಓಡಾಡಲಿರುವ ವಂದೇ ಭಾರತ್ ರೈಲು ಬೆಳಗ್ಗೆ 5:45ಕ್ಕೆ ಬೆಂಗಳೂರು ಬಿಡುತ್ತದೆ. ಧಾರವಾಡಕ್ಕೆ 12:10ಕ್ಕೆ ಆಗಮಿಸಿ ಬಳಿಕ ಧಾರವಾಡದಿಂದ 1:15ಕ್ಕೆ ರವಾನೆಯಾಗುತ್ತದೆ. ಇಂದು ಎಲ್ಲಾ ಜಿಲ್ಲೆಗಳ ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತು ಸಂಚರಿಸಲಿದೆ. ಬುಧವಾರದಿಂದ ಕೇವಲ 4 ನಿಲ್ದಾಣಗಳಲ್ಲಿ ಮಾತ್ರವೇ ನಿಲ್ಲಲಿದೆ. ಇದನ್ನೂ ಓದಿ: ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ ಆಯ್ಕೆ