ಮಾಸ್ಕೋ: ಸುಮಾರು 5 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ (Xi Jinping) ಮಧ್ಯೆ ದ್ವಿಪಕ್ಷೀಯ ಸಭೆ ನಡೆಯಲಿದೆ.
ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಭಾಗವಾಗಿ ಇಬ್ಬರು ನಾಯಕರ ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಐದು ವರ್ಷಗಳ ಬಳಿಕ ಉಭಯ ನಾಯಕರ ನಡುವಿನ ಮೊದಲ ಔಪಚಾರಿಕ ಭೇಟಿ ಇದಾಗಿದೆ.
Advertisement
ಮಂಗಳವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಚೀನಾ ಮಧ್ಯೆ ಸಭೆ ನಡೆಯಲಿದೆ ಎಂದು ತಿಳಿಸಿದರು.
Advertisement
Advertisement
#WATCH | Kazan, Russia: “I can confirm that there will be a bilateral meeting held between Prime Minister Modi and Chinese President Xi Jinping tomorrow on the sidelines of the BRICS Summit.” says Foreign Secretary Vikram Misri pic.twitter.com/588eOWgQJ4
— ANI (@ANI) October 22, 2024
Advertisement
2020 ರಲ್ಲಿ ನಡೆದ ಗಲ್ವಾನ್ ಘರ್ಷಣೆಯ ಬಳಿಕ ಭಾರತ ಹಾಗೂ ಚೀನಾ ಮಧ್ಯೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸತತ 4 ವರ್ಷಗಳಿಂದ ಭಾರತ ಮತ್ತು ಚೀನಾ ಜೊತೆಗಿನ ಮಾತುಕತೆ ಯಶಸ್ವಿಯಾಗಿದೆ. ಶಾಂತಿ ನೆಲೆಸದಿದ್ದರೆ ಚೀನಾ ಜೊತೆಗೆ ಶಾಂತಿ ಮಾತುಕತೆ ಸಾಧ್ಯವಿಲ್ಲ ಎಂದು ಭಾರತ ಹೇಳಿತ್ತು.
ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉದ್ದಕ್ಕೂ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾದ ಸಂಧಾನಕಾರರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ತಿಳಿಸಿದ್ದರು. ಇದನ್ನೂ ಓದಿ: THAAD ಎಂದರೇನು? ಇಸ್ರೇಲ್‌ಗೆ ಅಮೆರಿಕ ಇದನ್ನೂ ಏಕೆ ಕಳುಹಿಸಿದೆ?
ಅಕ್ಟೋಬರ್ 2019 ರಲ್ಲಿ ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರಧಾನಿ ಮೋದಿ ಮತ್ತು ಕ್ಷಿ ಜಿನ್‌ಪಿಂಗ್ ನಡುವೆ ಕೊನೆಯ ಬಾರಿ ಔಪಚಾರಿಕ ಸಭೆ ನಡೆದಿತ್ತು. ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಜಿನ್‍ಪಿಂಗ್ ಅವರನ್ನು ತಮಿಳುನಾಡಿನ ಸರ್ಕಾರವು ಅದ್ಧೂರಿಯಾಗಿ ಸ್ವಾಗತಿಸಿತ್ತು. ತಮಿಳುನಾಡಿನ ಸಾಂಪ್ರದಾಯಿಕ ಧಿರಿಸು ಬಿಳಿ ಪಂಚೆ, ಬಿಳಿ ಅಂಗಿ, ಶಲ್ಯ ಧರಿಸಿದ್ದ ಮೋದಿ, ಜಿನ್‍ಪಿಂಗ್ ಅವರಿಗೆ ಆತ್ಮೀಯ ಸ್ವಾಗತ ಕೋರಿದ್ದರು. ಆರಾಮಾಗಿ ಸುತ್ತಾಡುತ್ತಾ ಪಲ್ಲವರ ಕಾಲದ ದೇಗುಲಗಳ ಪರಿಚಯ ಮಾಡಿಕೊಟ್ಟಿದ್ದರು. ಮಹಾಭಾರತದ ಅರ್ಜುನ ತಪಸ್ಸು ಮಾಡಿದ್ದ ಸ್ಥಳ, ಒಂದೆಕಲ್ಲಿನಲ್ಲಿ ಕೆತ್ತಿದ ಪಂಚ ರಥ, ಹೀಗೆ ಹಲವು ಸ್ಥಳಗಳ ಮಹಿಮೆಯನ್ನು ವಿವರಿಸಿದ್ದರು. ಇದನ್ನೂ ಓದಿ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್ ಜೊತೆ ಮೋದಿ ಮಾತು
ಮೋದಿ ಮತ್ತು ಜಿನ್‍ಪಿಂಗ್ ಸಮುದ್ರ ತೀರದಲ್ಲಿ ವಿಹರಿಸಿದ್ದರು. ಕೋವಲಂನ ಕೋವ್ ಹೋಟೆಲ್‍ನಲ್ಲಿ ಇರಿಸಲಾಗಿದ್ದ ಕಲಾಕೃತಿಗಳು ಮತ್ತು ಕೈಮಗ್ಗ ಪ್ರದರ್ಶನವನ್ನು ವೀಕ್ಷಿಸಿದ್ದರು. ಈ ವೇಳೆ ಕೈಯಿಂದ ನೇಯ್ದ ಕ್ಸಿ ಜಿಂಗ್‍ಪಿಂಗ್ ಭಾವಚಿತ್ರವನ್ನು ಪ್ರಧಾನಿ ಮೋದಿ ಚೀನಾ ಅಧ್ಯಕ್ಷರಿಗೆ ನೀಡಿದ್ದರು.