ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಪ್ರಧಾನಿ ಮೋದಿ (PM Narendra Modi) ಅವರ ರಾಜ್ಯ ಪ್ರವಾಸವೂ ಜೋರಾಗಿದೆ. ಫೆ.6 ರಂದು ತುಮಕೂರಿನಲ್ಲಿ (Tumakuru) ನಿರ್ಮಾಣವಾಗಿರುವ ಎಚ್‌ಎಎಎಲ್ ಹೆಲಿಕಾಪ್ಟರ್ ಘಟಕ ಉದ್ಘಾಟನೆಗೆ ಪ್ರಧಾನಿ ಆಗಮಿಸಲಿದ್ದಾರೆ.
ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿಯನ್ನು ಬಲಗೊಳಿಸಬೇಕು ಎಂದು ಸಂಕಲ್ಪ ತೊಟ್ಟ ಕಮಲ ಪಡೆ ಪಧಾನಿ ಮೋದಿ ಅವರನ್ನು ಕರೆತಂದು ಎರಡನೇ ಹಂತದ ಪ್ರಚಾರ ಆರಂಭಿಸುತ್ತಿದೆ. ಅಂದು ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಬಿದರೆ ಕಾವಲ್ ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೆಲಿಕಾಪ್ಟರ್ ಘಟಕವನ್ನು (HAL Helicopter Manufacturing Unit) ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
Advertisement
ಅಂದು ಮಧ್ಯಾಹ್ನ 3 ಗಂಟೆಗೆ ಎಚ್‌ಎಎಲ್ ಹೆಲಿಪ್ಯಾಡ್‌ಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬಳಿಕ 3:15 ರಿಂದ ಪ್ರಾರಂಭವಾಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಚ್‌ಎಎಲ್ ಘಟಕ ಉದ್ಘಾಟನೆ ಜೊತೆಗೆ ಜಲ ಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
Advertisement
Advertisement
ಯಾವ ಹೆಲಿಕಾಪ್ಟರ್ ತಯಾರಾಗುತ್ತೆ?
ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲು ಸಂಪೂರ್ಣ ಸ್ವದೇಶದಲ್ಲೇ ಸೇನೆಗೆ ಅಗತ್ಯ ಇರುವ ಶಸ್ತ್ರ ಹಾಗೂ ವಾಹನಗಳನ್ನು ತಯಾರಿಸಿರುವ ದೂರ ದೃಷ್ಟಿ ಹಿನ್ನೆಯಲ್ಲಿ ಮೋದಿಯವರೇ 2016 ರಲ್ಲಿ ಈ ಘಟಕಕ್ಕೆ ಶಂಕುಸ್ಥಾಪನೆ ಮಾಡಿದ್ದರು. 2018 ರಲ್ಲಿ ಪ್ರಯೋಗಾರ್ಥವಾಗಿ ಹೆಲಿಕಾಪ್ಟರ್ ಹಾರಾಟ ಮಾಡಿತ್ತು. ಈ ಘಟಕ ಮೊದಲೇ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕೋವಿಡ್ ಇತ್ಯಾದಿ ಕಾರಣಗಳಿಂದ ತಡವಾಗಿ ಲೋಕಾರ್ಪಣೆಯಾಗುತ್ತಿದೆ.
Advertisement
ಒಟ್ಟು 616 ಎಕರೆ ಭೂ ಪ್ರದೇಶದಲ್ಲಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ಲಘು ಯುದ್ದ ಹೆಲಿಕಾಪ್ಟರ್‌ಗಳು ಇಲ್ಲಿ ತಯಾರಾಗಲಿದೆ. ಈ ಘಟಕದಲ್ಲಿ ತಯಾರಾದ 5 ರಿಂದ 6 ಮಂದಿ ಕುಳಿತುಕೊಳ್ಳುವ ಕಾಪ್ಟರ್‌ಗಳು ಭೂ ಸೇನೆ, ವಾಯುಸೇನೆಗೆ ಬಳಕೆಯಾಗಲಿದೆ. ಒಟ್ಟು 5 ಸಾವಿರ ಜನರಿಗೆ ಈ ಘಟಕದ ಮೂಲಕ ಉದ್ಯೋಗ ಲಭಿಸಲಿದೆ. ಇದನ್ನೂ ಓದಿ: ಫೆ.13 ರಿಂದ ಬೆಂಗ್ಳೂರಲ್ಲಿ ಏರ್ ಶೋ – LCA Tejas ಪ್ರಮುಖ ಆಕರ್ಷಣೆ
ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ಕನಸಿನ ಕೂಸು ಎಂದೇ ಬಿಂಬಿತವಾಗಿರುವ ಎಚ್‌ಎಎಲ್ ಘಟಕದ 614 ಎಕರೆ ಜಾಗದ ಪೈಕಿ 529 ಎಕರೆ ಜಾಗದಲ್ಲಿ ಹೆಲಿಕಾಪ್ಟರ್ ಬಿಡಿ ಭಾಗ ತಯಾರಿಸುವ, ಜೋಡಿಸುವ ಕಟ್ಟಡಗಳ ಘಟಕಗಳ ನಿರ್ಮಾಣವಾಗಿದೆ. ಈ ಘಟಕದಲ್ಲಿ ರನ್‌ವೇ, ಆಸ್ಪತ್ರೆ, ಆಡಳಿತ ವಿಭಾಗ ಸೇರಿದಂತೆ ಇನ್ನಿತರೆ ಕಚೇರಿಗಳನ್ನು ಒಳಗೊಂಡಿದೆ. ಈ ಘಟಕ ಸ್ಥಾಪನೆ ತುಮಕೂರು ಜಿಲ್ಲೆಯ ಪಾಲಿಗೆ ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
ಪ್ರತಿ ವರ್ಷ 75 ಹೆಲಿಕಾಪ್ಟರ್ ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. 1 ಲಘು ಹೆಲಿಕಾಪ್ಟರ್ ಉತ್ಪಾದನೆಗೆ 30 ಕೋಟಿ ರೂ. ವೆಚ್ಚವಾಗಲಿದ್ದು ಪ್ರತೀ ವರ್ಷ 2 ಸಾವಿರ ಕೋಟಿ ರೂ. ವಹಿವಾಟು ನಡೆಯಬಹುದು ಎಂದು ಅಂದಾಜಿಸಲಾಗಿದೆ.
ಮಾರ್ಗ ಬದಲಾವಣೆ:
ಮೋದಿ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಮಾರ್ಗ ಬದಲಿಸಲಾಗಿದೆ. ಫೆ.6 ರಂದು ತಿಪಟೂರು ಶಿವಮೊಗ್ಗ ಕಡೆಗೆ ಹೋಗುವ ವಾಹನಗಳು ನಿಟ್ಟೂರು, ಟಿ.ಬಿ.ಕ್ರಾಸ್, ತುರುವೇಕೆರೆ ಮೂಲಕ ಕೆ.ಬಿ.ಕ್ರಾಸ್ ಬದಲಾಯಿಸಲಾಗಿದೆ. ಅದೇ ರೀತಿ ಶಿವಮೊಗ್ಗ, ತಿಪಟೂರಿಂದ ಬೆಂಗಳೂರಿಗೆ ಹೋಗುವ ವಾಹನಗಳು ಕೂಡ ಕೆ.ಬಿ.ಕ್ರಾಸ್, ತುರುವೇಕೆರೆ, ಟಿ.ಬಿ.ಕ್ರಾಸ್ ಮೂಲಕ ನಿಟ್ಟೂರು ಮೂಲಕ ಸಾಗಬಹುದಾಗಿದೆ.
1 ಲಕ್ಷ ಜನ ಭಾಗಿ ಸಾಧ್ಯತೆ:
ಈ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ. ಸಾರ್ವಜನಿಕರೆಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹಾಜರಾಗುವ ಸಾರ್ವಜನಿಕರು ನೀರಿನ ಬಾಟಲ್, ಬಟ್ಟೆ, ಸೇರಿದಂತೆ ಯಾವುದೇ ವಸ್ತುಗಳನ್ನು ತರುವಂತಿಲ್ಲ. ಸುಮಾರು 2.5 ಸಾವಿರ ಪೊಲೀಸರನ್ನು ಭದ್ರತೆಗೆಗಾಗಿ ನಿಯೋಜನೆ ಮಾಡಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k