ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಲೋಕಸಭೆಯಲ್ಲಿ (Lok Sabha) ಭಾಷಣ ಮಾಡಲಿದ್ದಾರೆ.
ಮೋದಿ ಭಾಷಣದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಬಿಜೆಪಿ ಸಂಸದರು (BJP MPs) ಲೋಕಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕೆಂದು ಬಿಜೆಪಿ ಸೂಚಿಸಿದೆ. ಇದನ್ನೂ ಓದಿ: ಮೋದಿ ಪೋಸ್ಟರ್ ವಿರೂಪ – ಮಹಾರಾಷ್ಟ್ರದ ಯುವ ಮೋರ್ಚಾ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್
Advertisement
Advertisement
ಬಜೆಟ್ ಅಧಿವೇಶನದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಸರ್ಕಾರದ 10 ವರ್ಷದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಂದು ರಾಷ್ಟ್ರಪತಿ ಭಾಷಣಕ್ಕೆ ಉತ್ತರ ನೀಡಲಿದ್ದಾರೆ.
Advertisement
ಮುಂದೆ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮೋದಿ ಅವರ ಈ ಭಾಷಣ ಮಹತ್ವ ಪಡೆದುಕೊಂಡಿದೆ. ರಾಮ ಮಂದಿರ ಲೋಕಾರ್ಪಣೆ, ಸರ್ಕಾರದ ಸಾಧನೆ, ಆರ್ಥಿಕ ಪ್ರಗತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಜೊತೆಗೆ ಐಎನ್‌ಡಿಐಎ (INDIA) ಒಕ್ಕೂಟದ ಬಗ್ಗೆ ವ್ಯಂಗ್ಯ, ವಾಗ್ದಾಳಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಮಂಡ್ಯ ಕ್ಷೇತ್ರವನ್ನು JDSಗೆ ಬಿಟ್ಕೊಡಬಾರದು – BJP ಹೈಕಮಾಂಡ್ ಮೇಲೆ ನಾರಾಯಣಗೌಡ, ಪ್ರೀತಂ ಒತ್ತಡ
Advertisement