ಟೋಕಿಯೊ: ಉಕ್ರೇನ್ (Ukrain) ಮೇಲೆ ರಷ್ಯಾ (Russia) ಯುದ್ಧ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜಪಾನಿನ (Japan) ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ (G7 summit) ನೇಪಥ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಇಂದು ಭೇಟಿಯಾದರು. ಕಳೆದ ವರ್ಷ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ. ಇದನ್ನೂ ಓದಿ: ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ
Advertisement
Advertisement
ಉಕ್ರೇನ್‌ನಲ್ಲಿನ ಯುದ್ಧವು ಇಡೀ ಜಗತ್ತಿಗೆ ದೊಡ್ಡ ಸಮಸ್ಯೆಯಾಗಿದೆ. ಇದು ಪ್ರಪಂಚದ ಮೇಲೆ ಹಲವಾರು ರೀತಿಯಲ್ಲಿ ಪರಿಣಾಮ ಬೀರಿದೆ. ಆದರೆ ನಾನು ಇದನ್ನು ರಾಜಕೀಯ ಅಥವಾ ಆರ್ಥಿಕ ಸಮಸ್ಯೆ ಎಂದು ಪರಿಗಣಿಸುವುದಿಲ್ಲ. ಇದು ನನಗೆ ಮಾನವೀಯತೆ ಮತ್ತು ಮಾನವೀಯ ಮೌಲ್ಯಗಳ ಸಮಸ್ಯೆಯಾಗಿದೆ. ಯುದ್ಧದ ನೋವು ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ. ಕಳೆದ ವರ್ಷ ನಮ್ಮ ಮಕ್ಕಳು ಉಕ್ರೇನ್‌ನಿಂದ ಹಿಂದಿರುಗಿದಾಗ ಮತ್ತು ಅಲ್ಲಿನ ಪರಿಸ್ಥಿತಿಗಳನ್ನು ವಿವರಿಸಿದಾಗ, ನಿಮ್ಮ ನಾಗರಿಕರ ವೇದನೆಯನ್ನು ನಾನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. ಈ ಪರಿಸ್ಥಿತಿಯನ್ನು ಪರಿಹರಿಸಲು ಭಾರತ ಮತ್ತು ನಾನು ವೈಯಕ್ತಿಕವಾಗಿ ನಮ್ಮ ಸಾಮರ್ಥ್ಯದಲ್ಲಿ ಏನು ಬೇಕಾದರೂ ಮಾಡುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮೋದಿ ಅವರು ಝೆಲೆನ್ಸ್ಕಿಗೆ ತಿಳಿಸಿದ್ದಾರೆ.
Advertisement
Advertisement
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಪಾಲ್ಗೊಂಡಿದ್ದ ಸಭೆಯ ಛಾಯಾಚಿತ್ರಗಳನ್ನು ಪ್ರಧಾನಿ ಕಾರ್ಯಾಲಯ ಹಂಚಿಕೊಂಡಿದೆ. ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಿ7 ಶೃಂಗಸಭೆಯಲ್ಲಿ ಮೂರು ಸೆಷನ್‌ಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜಪಾನ್‌ಗೆ ಭೇಟಿ ನೀಡಿದ್ದಾರೆ. ಉಕ್ರೇನ್ ಅಧ್ಯಕ್ಷರು ಸಹ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?