ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಜುಲೈ 8 ರಂದು ರಷ್ಯಾಗೆ (Russia) ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (Vladimir Putin) ಜೊತೆ ಮಾತುಕತೆ ನಡೆಸಲಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ರಕ್ಷಣೆ, ತೈಲ, ಅನಿಲ ಮತ್ತು ಇತರ ಭಾರತೀಯ ಕಾರ್ಯತಂತ್ರದ ಹಿತಾಸಕ್ತಿಗಳ ಕುರಿತು ಚರ್ಚೆ ನಡೆಯಲಿದೆ ಎಂದು ವರದಿಯಾಗಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ (US Presidential Election) ನಡೆಯಲು ಕೆಲವೇ ತಿಂಗಳು ಬಾಕಿ ಇರುವಾಗ ಮೋದಿ ರಷ್ಯಾಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದಿದೆ. ಇದನ್ನೂ ಓದಿ: ಇಷ್ಟೆಲ್ಲಾ ಅವಮಾನ ಆದ್ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರಲ್ಲ ಅನ್ಸುತ್ತೆ: ಆರ್.ಅಶೋಕ್
Advertisement
Advertisement
ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಗೆ ಭೇಟಿ ನೀಡಿದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ತೆರಳುತ್ತಿರುವ ಎರಡನೇ ವಿದೇಶ ಪ್ರವಾಸ ಇದಾಗಿದೆ. ಇದನ್ನೂ ಓದಿ: 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರ್ನಾಟಕ ಮುಂದಾಗುತ್ತಿದ್ದಂತೆ ಹೊಸೂರಿನಲ್ಲಿ ಏರ್ಪೋರ್ಟ್ ಘೋಷಿಸಿದ ಸ್ಟಾಲಿನ್
Advertisement
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿ ಮಾಡಿದ್ದರು. 2022 ರಲ್ಲಿ ಉಜ್ಬೇಕಿಸ್ತಾನ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ಕೊನೆಯ ಬಾರಿಗೆ ರಷ್ಯಾದ ಅಧ್ಯಕ್ಷರನ್ನು ಭೇಟಿಯಾಗಿದ್ದರು.
Advertisement