ಹುಬ್ಬಳ್ಳಿ: ಇಂದಿನಿಂದ ನಾಲ್ಕು ದಿನಗಳ ಕಾಲ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ 26 ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಮೋದಿಯವರ ಸ್ವಾಗತಕ್ಕೆ ಹುಬ್ಬಳ್ಳಿ ಮಧುವಣಗಿತ್ತಿ ಕಂಗೊಳಿಸುತ್ತಿದೆ.
Advertisement
ಮತ್ತೊಮ್ಮೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಜೆಪಿ ನಾಯಕರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಅಮಿತ್ ಶಾ (Amitshah), ನಡ್ಡಾ, ಗಡ್ಕರಿ ಬಳಿಕ ಈಗ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ.
Advertisement
Advertisement
ಸ್ವಾಮಿ ವಿವೇಕಾನಂದರ ಜಯಂತಿ (Swami Vivekananda Jayanti) ನಿಮಿತ್ತ ಧಾರವಾಡದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಗೆಂದು ಆಗಮಿಸಿಸೋ ನಮೋ ಸ್ವಾಗತಕ್ಕೆ ಧಾರವಾಡ (Dharwad) ಜಿಲ್ಲೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದಿನಿಂದ 4 ದಿನಗಳ ಕಾಲ ನಡೆಯುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕಾಗಿ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 30 ಸಾವಿರ ಜನಕ್ಕೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
Advertisement
ಮೋದಿ ಕಾರ್ಯಕ್ರಮಕ್ಕೂ ಮುನ್ನ ದೇಶದ ಯುವ ಸಾಂಸ್ಕೃತಿಕ ಗತವೈಭವ ಅನಾವರಣಗೊಳಲಿದ್ದು, ವಿವಿಧ ರಾಜ್ಯದ ಜಾನಪದ ಕಲೆ, ಯೋಗಾ, ಮಲ್ಲಗಂಭ ಪ್ರದರ್ಶನ ನಡೆಯಲಿದೆ. 28 ರಾಜ್ಯದ 6 ಕೇಂದ್ರಾಡಳಿತ ಪ್ರದೇಶಗಳ ವಾಕ್‍ಥಾನ್ ನಡೆಯಲಿದೆ. ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ಸೇರಿ ಹಲವರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ
ಮಧ್ಯಾಹ್ನ 3.40ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ (Hubballi Airport) ಕ್ಕೆ ಬರುವ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ (Basavaraj Bommai) ಸ್ವಾಗತ ನೀಡಲಿದ್ದಾರೆ. 3.45 ರಿಂದ 4 ಗಂಟೆ ವರೆಗೂ 15 ನಿಮಿಷ ರೋಡ್ ಶೋ ಮಾಡಲಿದ್ದಾರೆ. ಮಾರ್ಗ ಮಧ್ಯೆ ಐದು ಕಡೆ ಮೋದಿ ವಾಹನ ನಿಲ್ಲಿಸೋ ಸಾಧ್ಯತೆ ಇದ್ದು, ವಾಹನ ನಿಲ್ಲಿಸಿ ಜನರತ್ತ ಮೋದಿ ಕೈಬೀಸಲಿದ್ದಾರೆ. ಏರಪೋರ್ಟ್‍ನಿಂದ ಗೋಕುಲ್ ರೋಡ್, ಅಕ್ಷಯಪಾರ್ಕ್, ಹೊಸೂರು ಸರ್ಕಲ್, ದೇಶಪಾಂಡೆ ನಗರ,ಕೋರ್ಟ್ ಸರ್ಕಲ್ ಮೂಲಕ ರೇಲ್ವೆ ಮೈದಾನಕ್ಕೆ ಆಗಮಿಸಲಿದ್ದಾರೆ. 4 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ 5.15 ಕಾರ್ಯಕ್ರಮ ಮುಕ್ತಾಯವಾಗಲಿದೆ.
ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ: ಹುಬ್ಬಳ್ಳಿಗೆ ಬರುತ್ತಿರುವ ಪ್ರಧಾನಿ ಮೋದಿಗಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ. ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ತಿರಂಗವನ್ನು ಸಹ ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ. ಹಾವೇರಿಯ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ.
ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ. ಬೆಳಗ್ಗೆಯಿಂದಲೇ ಹೊರಗಿನಿಂದ ನಗರಕ್ಕೆ ಬರುವ ವಾಹನಗಳಿಗೆ ಆಯಾಯಾ ರಸ್ತೆಗಳ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5.35ಕ್ಕೆ ದೆಹಲಿಯತ್ತ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ.
ಒಟ್ಟಾರೆ ಪ್ರಧಾನಿ ಮೋದಿ ಸ್ವಾಗತಕ್ಕೆ ಪೇಡಾ ನಗರಿ ಸಕಲ ರೀತಿಯಲ್ಲಿ ಸಜ್ಜಾಗಿದ್ದು, ರೈಲ್ವೆ ಮೈದಾನದಲ್ಲಿ ಯುವಶಕ್ತಿ ಅನಾವರಣಗೊಳಲಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k