ನವದೆಹಲಿ: 6 ವರ್ಷದ ಬಳಿಕ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೌದಿ ಅರೇಬಿಯಾಕ್ಕೆ (Saudi Arabia) ಭೇಟಿ ನೀಡುತ್ತಿದ್ದು, 2 ದಿನಗಳ ಪ್ರವಾಸವನ್ನು ಕೈಗೊಂಡಿದ್ದಾರೆ.
ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ (Mohammed bin Salman Al Saud) ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡುತ್ತಿದ್ದು, ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಭೇಟಿ ಇದಾಗಿದೆ.ಇದನ್ನೂ ಓದಿ: ಶಾರ್ಟ್ ಡ್ರೆಸ್ ಧರಿಸಿ ನಿವೇದಿತಾ ಹೊಸ ರೀಲ್ಸ್- ಕಾಲೆಳೆದ ನೆಟ್ಟಿಗರು
ಏ.22 ಹಾಗೂ 23ರಂದು ಎರಡು ದಿನಗಳ ಕಾಲ ಭೇಟಿ ನೀಡುತ್ತಿದ್ದು, ಇದಕ್ಕೂ ಮೊದಲು 2016 ಹಾಗೂ 2019ರಲ್ಲಿ 2 ಬಾರಿ ಸೌದಿ ಅರೇಬಿಯಾಗೆ ಭೇಟಿ ನೀಡಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಾಗೂ ಭಾರತ-ಸೌದಿ ಅರೇಬಿಯಾ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಲು ಸೌದಿ ಅರೇಬಿಯಾ ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನವದೆಹಲಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ಪ್ರಧಾನಿ ಮೋದಿ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ.
ಸದ್ಯ ಈ ಭೇಟಿಯಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಜೊತೆಗೆ ರಾಜಕೀಯ, ರಕ್ಷಣೆ, ಭದ್ರತೆ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ವಿವಿಧ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ದ್ವಿಪಕ್ಷೀಯ ಮಾತುಕತೆ ಬಳಿಕ ಇಂಧನ, ರಕ್ಷಣೆ ಮತ್ತು ವ್ಯಾಪಾರದಂತಹ ನಿರ್ಣಾಯಕ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಜೊತೆಗೆ ಸೌದಿಯ ರಾಜಧಾನಿ ರಿಯಾದ್‌ನ 100 ಬಿಲಿಯನ್ ಡಾಲರ್ ಹೂಡಿಕೆ ಯೋಜನೆಯನ್ನು ಭಾರತಕ್ಕಾಗಿ ತ್ವರಿತಗೊಳಿಸುವ ಸಾಧ್ಯತೆಯಿದೆ. ಬಳಿಕ ಹಲವು ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಮೋದಿ-ಸಲ್ಮಾನ್ ದ್ವಿಪಕ್ಷೀಯ ಮಾತುಕತೆಯ ನಂತರ ಹಸಿರು ಹೈಡ್ರೋಜನ್ ಸೇರಿ ಹಲವು ಒಪ್ಪಂದಗಳಿಗೆ ಎರಡೂ ಕಡೆಯವರು ಸಹಿ ಹಾಕುವ ನಿರೀಕ್ಷೆಯಿದೆ ಎಂದು ತಿಳಿಸಿದ್ದರು.
ಮುಂದಿನ ತಿಂಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ.ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ