ನವದೆಹಲಿ/ಟೆಹ್ರಾನ್: ಅಜರ್ಬೈಜಾನ್ನಿಂದ ಟೆಹ್ರಾನ್ಗೆ ಹಿಂದಿರುಗುತ್ತಿದ್ದಾಗ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi), ವಿದೇಶಾಂಗ ಸಚಿವರು ಮತ್ತು ಇತರ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಒಳಗೊಂಡ ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
Advertisement
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ, ಇರಾನ್ ಅಧ್ಯಕ್ಷ (Iran President) ಹಾಗೂ ಇತರ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಸಂಬಂಧಿಸಿದ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಈ ಸಂಕಷ್ಟದ ಸಮಯದಲ್ಲಿ ನಾವು ಇರಾನ್ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಪತನವಾದ ಹೆಲಿಕಾಪ್ಟರ್ನಲ್ಲಿದ್ದವರು ಶೀಘ್ರವೇ ಸುರಕ್ಷಿತವಾಗಿ ವಾಪಸ್ ಆಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತಗಳ ಮಧ್ಯೆ ಪತನ: ವರದಿ
Advertisement
Advertisement
ಆಗಿದ್ದೇನು..?: ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಅಜರ್ಬೈಜಾನ್ನ (Azerbaijan to Tehran) ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ದಟ್ಟ ಮಂಜಿನಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಇಸ್ರಾನ್-ಇರಾನ್ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಅಮೀರ್ ನಾಪತ್ತೆಯಾಗಿದ್ದು, 65 ತಂಡಗಳಿಂದ ತೀವ್ರ ಶೋಧ ನಡೀತಾ ಇದೆ. ಪ್ರತಿಕೂಲ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಕಾಪ್ಟರ್ ಪತನಗೊಂಡಿದೆ ಎನ್ನಲಾಗಿದೆ. ದೇಶದಾದ್ಯಂತ ರೈಸಿಗಾಗಿ ಪ್ರಾರ್ಥಿಸಲಾಗುತ್ತಿದೆ.
Advertisement
Deeply concerned by reports regarding President Raisi’s helicopter flight today. We stand in solidarity with the Iranian people in this hour of distress, and pray for well being of the President and his entourage.
— Narendra Modi (@narendramodi) May 19, 2024
63 ವಯಸ್ಸಿನ ರೈಸಿ 2021 ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ ನೈತಿಕತೆಯ ಕಾನೂನುಗಳನ್ನು ಬಿಗಿಗೊಳಿಸುವಂತೆ ಆದೇಶಿಸಿದ್ದರು. ವಿಶ್ವ ಶಕ್ತಿಗಳೊಂದಿಗೆ ಪರಮಾಣು ಮಾತುಕತೆಗಳನ್ನು ತಳ್ಳಿಹಾಕಿದ್ದರು.