ಮೈಸೂರು: ಅದ್ಧೂರಿಯಾಗಿ ನಡೆಯುವ ಮೈಸೂರು ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆಗೆ ಬರುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದರು.
ಮೈಸೂರು ದಸರಾದಲ್ಲಿ ಭಾಗವಹಿಸಲಿರುವ ಗಣ್ಯರ ಬಗ್ಗೆ ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರನ್ನು ಅರಮನೆಯ ಭೇಟಿ ಬಗ್ಗೆ ಈಗಾಗಲೇ ಕೇಳಲಾಗಿದೆ. ಆದರೆ ಇನ್ನೂ ರಾಷ್ಟ್ರಪತಿಗಳಿಂದ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಪ್ರಯತ್ನದಿಂದಾಗಿ ಚೀತಾ ಭಾರತಕ್ಕೆ ಬಂದಿವೆ: ಕಾಂಗ್ರೆಸ್
Advertisement
Advertisement
ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರದ 4 ಮಂತ್ರಿಗಳು ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕುಳಿತುಕೊಳ್ಳುವವರ ಪಟ್ಟಿ ಅಂತಿಮಗೊಳ್ಳುತ್ತದೆ. ದಸರಾ ಪಾಸ್ ಹಾಗೂ ಗೋಲ್ಡ್ ಕಾರ್ಡ್ ಕುರಿತು ಇಂದು ಸಂಜೆಯೊಳಗೆ ಅಂತಿಮ ತೀರ್ಮಾನವಾಗುತ್ತದೆ. ಯುವದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಧ್ಯಾಹ್ನ ಸಭೆ ನಡೆಸಿ ಸಂಜೆಯೊಳಗೆ ತೀರ್ಮಾನವನ್ನು ಅಂತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ
Advertisement
ದಸರಾಗೆ ಹಣ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆ ಮಾಡಿರುವುದಾಗಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದ್ಯುತ್ ದೀಪಾಲಂಕಾರಕ್ಕೆ 4.5 ಕೋಟಿ ರೂ. ನಿಗದಿ ಮಾಡಲಾಗಿದೆ. ಎಲ್ಲವನ್ನೂ ವ್ಯವಸ್ಥಿತವಾಗಿ ಮಾಡುತ್ತೇವೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.