ನವದೆಹಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರದ್ದು (HD Kumaraswamy) ಇಂದು ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಗಣ್ಯಾತಿಗಣ್ಯರು ಮಾಜಿ ಸಿಎಂಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಂತೆಯೇ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ಹೆಚ್ಡಿಕೆಗೆ ವಿಶ್ ಮಾಡಿದ್ದಾರೆ.
ಈ ಸಂಬಂಧ ಎಕ್ಸ್ನಲ್ಲಿ ಬರೆದುಕೊಂಡಿರುವ ಮೋದಿ, ಹೆಚ್.ಡಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ (Birthday) ಶುಭಾಶಯಗಳು. ಕರ್ನಾಟಕದ ಅಭಿವೃದ್ಧಿಗೋಸ್ಕರ ಹಲವು ಬಾರಿ ಚರ್ಚೆ ನಡೆಸಿದ್ದೇವೆ. ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುವುದಾಗಿ ಮೋದಿ ಬರೆದುಕೊಂಡು ಹೆಚ್ಡಿಕೆಯವರನ್ನು ಟ್ಯಾಗ್ ಮಾಡಿದ್ದಾರೆ.
ಪ್ರಧಾನಿ ಎಕ್ಸ್ ಗೆ ಪ್ರತಿಕ್ರಿಯಿಸಿರುವ ಹೆಚ್ಡಿಕೆ, ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮೇಲುಕೋಟೆಯಲ್ಲಿ ಟಿಪ್ಪು ಬ್ರಾಹ್ಮಣರನ್ನು ಕತ್ತರಿಸಿದ್ದ ಇತಿಹಾಸವಿದೆ – ಅಶೋಕ್ ಕೆಂಡಾಮಂಡಲ
ಶುಕ್ರವಾರ ಎಕ್ಸ್ ನಲ್ಲಿ ಹೆಚ್ಡಿಕೆಯವರು, ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ಶನಿವಾರ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದರು.