ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (AICC) ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಯವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಶುಭಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ (Congress) ಪಕ್ಷದ ನೂತನ ಅಧ್ಯಕ್ಷರಾಗುವ ಮೂಲಕ ಜವಾಬ್ದಾರಿಸಿ ವಹಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆಯವರಿಗೆ ಶುಭಾಶಯಗಳನ್ನು ತಿಳಿಸುತ್ತೇನೆ. ಮುಂದೆ ಅವರು ಫಲಪ್ರದವಾದ ಅಧಿಕಾರಾವಧಿಯನ್ನು ಹೊಂದಲಿ ಎಂದು ಬರೆದುಕೊಂಡಿದ್ದಾರೆ.
Advertisement
My best wishes to Shri Mallikarjun Kharge Ji for his new responsibility as President of @INCIndia. May he have a fruitful tenure ahead. @kharge
— Narendra Modi (@narendramodi) October 19, 2022
Advertisement
ಎಐಸಿಸಿ (AICC) ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ (Shashi Tharoor) 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ. ಇದನ್ನೂ ಓದಿ: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್ ಪಟ್ಟ
Advertisement
Advertisement
ಕರ್ನಾಟಕದ ಕಾಂಗ್ರೆಸ್ (Karnataka Congress) ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ತಿರುವನಂತಪುರಂ ಕ್ಷೇತ್ರದ ಸಂಸದ ಶಶಿ ತರೂರ್ ನಡುವೆ ಏರ್ಪಟ್ಟಿದ್ದ ಸ್ಪರ್ಧೆ ಇಂದು ಅಂತ್ಯಗೊಂಡಿದೆ.