ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Temple) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡಿ.30 ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Maryada Purushottam Shri Ram International Airport) ಮತ್ತು ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆಗೆ ನೇಪಾಳದಿಂದ ಬರ್ತಿದೆ ಚಿನ್ನಾಭರಣ, ವಸ್ತ್ರ, ಸಿಹಿತಿನಿಸು
Advertisement
Advertisement
ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ.ವರೆಗೆ ರೋಡ್ ಶೋ ನಡೆಯಲಿದೆ. ಇದಾದ ನಂತರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
Advertisement
ರೋಡ್ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಧು, ಸಂತರು ಮೋದಿ ಅವರನ್ನು ಆಶೀರ್ವದಿಸಲಿದ್ದಾರೆ. ಅಯೋಧ್ಯೆಯಲ್ಲಿ ನವೀಕೃತ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೂ ಮುನ್ನ ಸಿಂಗಾರಗೊಳ್ಳಲಿದೆ ರಾಮನ ಮೆಟ್ಟಿಲು! – ಏನಿದರ ಮಹತ್ವ? ಈ ಹೆಸರು ಯಾಕೆ ಬಂತು?
Advertisement
ಜ.22 ರಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ನೆರವೇರಲಿದೆ. ಪೂರ್ವಭಾವಿಯಾಗಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ.