Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
Last updated: February 17, 2026 7:06 pm
Public TV
Share
4 Min Read
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
SHARE

– ಟಾಟಾ,  ಏರ್‌ಬಸ್‌ನಿಂದ ಹೆಲಿಕಾಪ್ಟರ್‌ ತಯಾರಿ
– ವೇಮಗಲ್‌ನಲ್ಲಿ ವರ್ಷಕ್ಕೆ 10 ಹೆಲಿಕಾಪ್ಟರ್‌ ನಿರ್ಮಾಣ

ಕೋಲಾರ: ಫ್ರಾನ್ಸ್ ಮೂಲದ ಏರ್‌ಬಸ್ (Airbus) ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (TASL) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕ ಲೋಕಾರ್ಪಣೆಯಾಗಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯಯೆಲ್‌ ಮ್ಯಾಕ್ರನ್‌(Emmanuel Macron) ಅವರು ಮಹಾರಾಷ್ಟ್ರದ ಲೋಕಭವನದಿಂದ ವರ್ಚುಯಲ್ ಮೂಲಕ ಈ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇಮಗಲ್ ಘಟಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್‌, ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು, ಕೋಲಾರ ಸಂಸದ ಮಲ್ಲೇಶಬಾಬು ಉಪಸ್ಥಿತರಿದ್ದರು.

ಫ್ರಾನ್ಸ್, ಅಮೆರಿಕ, ಬ್ರೆಜಿಲ್ ನಂತರ ಭಾರತದಲ್ಲಿ ಜಗತ್ತಿನ ನಾಲ್ಕನೆಯ ಎಚ್125 ಹೆಲಿಕಾಪ್ಟರ್ ತಯಾರಿಕೆ ಮತ್ತು ಅಂತಿಮ ಜೋಡಣೆ ಘಟಕ ಸ್ಥಾಪನೆಯಾಗಿದೆ. ಮೊದಲು ಇಲ್ಲಿ ವರ್ಷಕ್ಕೆ 10 ಹೆಲಿಕಾಪ್ಟರುಗಳನ್ನು ತಯಾರಿಸಲಾಗುತ್ತದೆ. ಇಲ್ಲಿ ಏವಿಯಾನಿಕ್ಸ್, ಹೈಡ್ರಾಲಿಕ್ ಸರ್ಕ್ಯೂಟ್, ಬಿಡಿಭಾಗಗಳು, ಇಂಧನ ವ್ಯವಸ್ಥೆ ಮತ್ತು ಎಂಜಿನ್ನುಗಳ ತಯಾರಿಕೆ ಸೇರಿದಂತೆ ಹಲವು ಮಹತ್ವದ ಭಾಗಗಳನ್ನು ತಯಾರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಂಬಿ ಪಾಟೀಲ್‌, ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಈ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಹೇಳಿದರು.

#WATCH | Prime Minister @narendramodi and French President @EmmanuelMacron virtually inaugurated the Tata-Airbus Light Helicopter Final Assembly Line facility at Vemagal in Karnataka’s Kolar district.

The facility is a joint initiative by Tata Advanced Systems Limited and… pic.twitter.com/Bdw4KnT4OK

— PB-SHABD (@PBSHABD) February 17, 2026

ಈ ಘಟಕಕ್ಕೆ ನಾನು ಕೈಗಾರಿಕಾ ಸಚಿವನಾದ ಮೇಲೆ 17 ಎಕರೆ ಜಾಗ ಕೊಟ್ಟಿದ್ದು ದಾಖಲೆ ಅವಧಿ ಅಂದರೆ ಒಂದೂವರೆ ವರ್ಷದಲ್ಲಿ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.

ಯೋಜನೆಗೆ ತ್ವರಿತ ಗತಿಯಲ್ಲಿ ಅನುಮೋದನೆ, ಇಲಾಖೆಗಳ ನಡುವೆ ಅತ್ಯುತ್ತಮ ಸಮನ್ವಯ, ಮೂಲಸೌಕರ್ಯ ಸನ್ನದ್ಧತೆ ಮತ್ತು ಕೈಗಾರಿಕಾ ಪಾಲುದಾರರೊಂದಿಗೆ ಸಕ್ರಿಯ ಪಾಲ್ಗೊಳ್ಳುವಿಕೆಗಳಿಂದ ಈ ಚಾರಿತ್ರಿಕ ಯೋಜನೆ ಕ್ಷಿಪ್ರಗತಿಯಲ್ಲಿ ಅನುಷ್ಠಾನಗೊಂಡಿದೆ ಎಂದರು.

ಫ್ರಾನ್ಸ್, ಅಮೆರಿಕ, ಬ್ರೆಜಿಲ್ ನಂತರ ನಮ್ಮಲ್ಲಿ ಜಗತ್ತಿನ ನಾಲ್ಕನೆಯ ಎಚ್125 ಹೆಲಿಕಾಪ್ಟರ್ ತಯಾರಿಕೆ ಮತ್ತು ಅಂತಿಮ ಜೋಡಣೆ ಘಟಕ (ಎಫ್ಎಎಲ್- ಫೈನಲ್ ಅಸೆಂಬ್ಲಿ ಲೈನ್) ಬಂದಿರುವುದು ಈ ವಲಯಕ್ಕೆ ಮತ್ತಷ್ಟು ಬಲ ತರಲಿದೆ. ಜೊತೆಗೆ ನಿರ್ವಹಣೆ, ದುರಸ್ತಿ ಮತ್ತು ಓವರಹಾಲ್ (ಎಂಆರ್ಒ- ಮೇಂಟೆನೆನ್ಸ್, ರಿಪೇರ್ & ಓವರ್ಹಾಲ್) ಸ್ಥಾವರವೂ ಆರಂಭಗೊಂಡಿರುವುದು ರಾಜ್ಯದ ಕೈಗಾರಿಕಾಸ್ನೇಹಿ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

India’s First Private Sector Helicopter Final Assembly Line Inaugurated in Kolar, Karnataka
– A Proud Moment for the State

Honoured to participate in the inaugural ceremony of the TATA – Airbus H125 Light Helicopter Final Assembly Line at Vemgal in Kolar district.

Hon’ble… pic.twitter.com/Yjj6M3Nl4l

— M B Patil (@MBPatil) February 17, 2026

ಇಲ್ಲಿ ಮೊದಲಿಗೆ ವರ್ಷಕ್ಕೆ 10 ಹೆಲಿಕಾಪ್ಟರುಗಳನ್ನು ತಯಾರಿಸಲಾಗುವುದು. ಮುಂದಿನ ಎರಡು ದಶಕಗಳಲ್ಲಿ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿ ಏವಿಯಾನಿಕ್ಸ್, ಹೈಡ್ರಾಲಿಕ್ ಸರ್ಕ್ಯೂಟ್, ಬಿಡಿಭಾಗಗಳು, ಇಂಧನ ವ್ಯವಸ್ಥೆ ಮತ್ತು ಎಂಜಿನ್ನುಗಳ ತಯಾರಿಕೆ ಸೇರಿದಂತೆ ಹಲವು ಮಹತ್ವದ ಚಟುವಟಿಕೆಗಳು ನಡೆಯಲಿವೆ. ಆಂಧ್ರಪ್ರದೇಶ, ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳ ತೀವ್ರ ಸ್ಪರ್ಧೆಯನ್ನು ಎದುರಿಸಿ, ರಾಜ್ಯವು ಈ ಯೋಜನೆಯನ್ನು ಗೆದ್ದುಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಅವರು ಬಣ್ಣಿಸಿದ್ದಾರೆ.

ಏರ್ ಬಸ್ ಕಂಪನಿಯು ಜಾಗತಿಕ ಮಟ್ಟದಲ್ಲಿ ಏಕ ಎಂಜಿನ್ ಹೆಲಿಕಾಪ್ಟರುಗಳ ಕ್ಷೇತ್ರದಲ್ಲಿ 4,300 ಹೆಲಿಕಾಪ್ಟರುಗಳೊಂದಿಗೆ, ಮಾರುಕಟ್ಟೆಯಲ್ಲಿ ಶೇ.80ರಷ್ಟು ಪಾಲು ಹೊಂದಿದೆ. ಈ ಹೆಲಿಕಾಪ್ಟರುಗಳು ಇದುವರೆಗೂ 38 ಮಿಲಿಯನ್ ಗಂಟೆಗಳಷ್ಟು ಕಾಲ ಹಾರಾಟ ನಡೆಸಿ ದಾಖಲೆ ನಿರ್ಮಿಸಿವೆ. ರಾಜ್ಯದಲ್ಲಿ ಎಚ್125 ದರ್ಜೆಯ ಹೆಲಿಕಾಪ್ಟರ್ ತಯಾರಿಕೆಗೆ ಬೇಕಾದ ವಿಶ್ವಾಸಾರ್ಹತೆ ಮತ್ತು ಎಂಜಿನಿಯರಿಂಗ್ ಪರಿಣತಿ ಇದೆ. ಈ ವಲಯದಲ್ಲಿ ರಾಜ್ಯ ಸರಕಾರವು ಕೇಂದ್ರ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುವ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದ್ದಾರೆ.

 

My address at the inaugural ceremony of the “TATA Advanced Systems’ Final Assembly Line for the Airbus H125 Helicopter” at Vemagal, Kolar pic.twitter.com/TPCndaSvh3

— M B Patil (@MBPatil) February 17, 2026

ಈ ಘಟಕವು ಭಾರತದ ದಕ್ಷತೆಯು ಪಡೆದುಕೊಳ್ಳುತ್ತಿರುವ ಹೊಸ ಶಕ್ತಿ ಮತ್ತು ಜಾಗತಿಕ ಮಟ್ಟದಲ್ಲಿ ಏರ್ಪಡಿಸಿಕೊಳ್ಳುವ ಸಹಭಾಗಿತ್ವದ ಸಂಕೇತವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಮೃದ್ಧ ಅವಕಾಶಗಳು ತೆರೆದುಕೊಳ್ಳಲಿದ್ದು, ಉದ್ಯೋಗಸೃಷ್ಟಿಯೂ ಹೆಚ್ಚಾಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಆಧುನಿಕ ತಂತ್ರಜ್ಞಾನ ವಲಯಕ್ಕೆ ಪ್ರವೇಶ ಸಿಗಲಿದೆ.

TAGGED:AirbusEmmanuel Macronindianarendra modiTataಇಮ್ಯಾನ್ಯಯೆಲ್‌ ಮ್ಯಾಕ್ರನ್‌ಏರ್ಬಸ್ನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
25 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
29 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
59 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?