ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಲಭಿಸಿದೆ. ಸೈಂಟ್ ಆಂಡ್ರೂ ಪ್ರಶಸ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತಿಳಿಸಿದ್ದಾರೆ.
ಭಾರತ ಮತ್ತು ರಷ್ಯಾದ ಸಂಬಂಧ ಸುಧಾರಣೆಗೆ ಶ್ರಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಈ ಗೌರವ ನೀಡಲಾಗಿದೆ ಎಂದು ರಷ್ಯಾ ತಿಳಿಸಿದೆ.
Advertisement
President Putin signs the decree to award the Prime Minister of India @narendramodi the highest civilian award of the Russian Federation -"Order of Saint Andrew the Apostle"@PMOIndia @MEAIndia @IndianDiplomacy @KremlinRussia_E @PTI_News @mfa_russiahttps://t.co/WSogiFGcNf pic.twitter.com/gGwXnptvdZ
— India in Russia (@IndEmbMoscow) April 12, 2019
Advertisement
ಈ ಗೌರವ ಪಡೆದ ಮೊದಲ ಭಾರತದ ಪ್ರಧಾನಿ ಮೋದಿ ಆಗಿದ್ದಾರೆ. ಈ ಹಿಂದೆ ಈ ಪ್ರಶಸ್ತಿಯನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್, ಅಜರ್ ಬೈಜಾನ್ ಪ್ರಧಾನಿ ಹೈದರ್ ಅಲಿಯಾವ್, ಕಜಕಿಸ್ತಾನದ ಅಧ್ಯಕ್ಷ ನುರ್ಸುಲ್ಟಾನ್ ನಜರ್ಬಯೆವ್ ಅವರಿಗೆ ಸಿಕ್ಕಿತ್ತು.
Advertisement
ಏಪ್ರಿಲ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರ `ಝಾಯೆದ್ ಮೆಡಲ್’ ಪುರುಸ್ಕಾರಕ್ಕೆ ಭಾಜನರಾಗಿದ್ದಾರೆ. ಉಭಯ ದೇಶಗಳ ನಡುವೆ ಉತ್ತಮ ಸಂಬಂಧ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಅವರಿಗೆ ಝಾಯೆದ್ ಮೆಡಲ್ ನೀಡಿ ಗೌರವ ಸಲ್ಲಿಸಲಾಗುತ್ತಿದೆ ಎಂದು ಯುಎಇ ಸರ್ಕಾರ ತಿಳಿಸಿತ್ತು.
Advertisement
ಝಾಯೆದ್ ಮೆಡಲ್ ಪುರಸ್ಕಾರ ಕುರಿತು ಟ್ವೀಟ್ ಮಾಡಿರುವ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು, ಭಾರತದೊಂದಿಗೆ ಐತಿಹಾಸಿಕ ಹಾಗೂ ಸಮಗ್ರವಾದ ಕಾರ್ಯತಂತ್ರದ ಬಾಂಧವ್ಯ ಹೊಂದಿದ್ದೇವೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಉತ್ತೇಜನ ನೀಡಿದರು. ಅವರ ಈ ಪ್ರಯತ್ನಕ್ಕಾಗಿ ಝಾಯೆದ್ ಮೆಡಲ್ ನೀಡಿ ಗೌರವಿಸುತ್ತಿದೆ ಎಂದು ಹೇಳಿದ್ದರು.
2018ರಲ್ಲಿ ವಿಶ್ವಸಂಸ್ಥೆಯ ಅತಿದೊಡ್ಡ ಪ್ರಶಸ್ತಿ ಎನಿಸಿಕೊಂಡಿರುವ ಚಾಂಪಿಯನ್ಸ್ ಆಫ್ ಅರ್ಥ್ ಪ್ರಶಸ್ತಿಯ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದರು. ಈ ಗೌರವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರಾನ್ ಅವರ ಜೊತೆ ಹಂಚಿಕೊಂಡಿದ್ದರು. ಪಾಲಿಸಿ ಆಫ್ ಲೀಡರ್ ಶಿಪ್ ವಿಭಾಗದಲ್ಲಿ ಮೋದಿ ಅವರಿಗೆ ಈ ಗೌರವ ಸಿಕ್ಕಿತ್ತು. ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟ ಸ್ಥಾಪನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಕ್ಕಾಗಿ ಮೋದಿಗೆ ಈ ಗೌರವ ನೀಡಲಾಗಿತ್ತು.