ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು: ಯೋಗಿ ಆದಿತ್ಯನಾಥ್

Public TV
2 Min Read
yogi adithyanath

ಲಕ್ನೋ: ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ವೇಳೆ ಉಂಟಾದ ಭದ್ರತಾ ಲೋಪವು ವಾಸ್ತವವಾಗಿ ಪೂರ್ವ ಯೋಜಿತ, ಪ್ರಾಯೋಜಿತ ಪಿತೂರಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು.

Charanjit Singh Channi 4

ಪಂಜಾಬ್ ಸರ್ಕಾರವು ಮಾರ್ಗಸೂಚಿಗಳನ್ನು ಅನುಸರಿಸಲಿಲ್ಲ. ಪಂಜಾಬ್‍ಗೆ ಮೋದಿ ಅವರು ಭೇಟಿ ನೀಡಿದ ವೇಳೆ ಡ್ರೋನ್ ದಾಳಿ ಅಥವಾ ಇದೇ ರೀತಿಯ ಇನ್ನೂ ಯಾವುದಾದರೂ ದಾಳಿಗೆ ಸಂಚು ರೂಪಿಸಲಾಗಿತ್ತು.  ಆದರೆ ಪಂಜಾಬ್ ಸರ್ಕಾರ ಈ ಎಲ್ಲವನ್ನು ನಿರ್ಲಕ್ಷಿಸಿದೆ. ಹೀಗಾಗಿ ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

pm modi

ಬಟಿಂಡಾದಲ್ಲಿ ಜನವರಿ 5ರಂದು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು.

NARENDRA MODI 1 5

ಬಿಜೆಪಿ ಆಡಳಿತದಲ್ಲಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಇತ್ತೀಚೆಗೆ ಈ ಘಟನೆ ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರಧಾನಿ ನರೇಂದ್ರ ಮೋದಿಯವರ ಸುರಕ್ಷತೆ ನೀಡದೇ ಅಪಾಯಕ್ಕೆ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದರು.

NARENDRA MODI CAR PUNJAB

ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ಅವರು ಜನವರಿ 5 ರಂದು ಚುನಾವಣಾ ನಿಮಿತ್ತ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಂಜಾಬ್ ಮುಖ್ಯಮಂತ್ರಿ ಸಂಚು ರೂಪಿಸಿದ್ದಾರೆ. ಇದನ್ನೂ ಓದಿ: ಮೋದಿಗೆ ಭದ್ರತಾ ಲೋಪ – ಪಂಜಾಬ್ ತನ್ನ ಭವಿಷ್ಯದ ಬಗ್ಗೆ ಚಿಂತಿಸಬೇಕಿದೆ: ಬೊಮ್ಮಾಯಿ

himanta biswa sharma

ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ಮಾಡಲಾಗಿದ್ದು, ಇದು ಪೂರ್ವ ನಿಯೋಜಿತ ಸಂಚಾಗಿದೆ ಮತ್ತು ಈ ಬಗ್ಗೆ ಪಂಜಾಬ್ ಪೊಲೀಸರಿಗೂ ಸಹ ತಿಳಿದಿತ್ತು. ಈ ರೀತಿಯ ಪಿತೂರಿಯಲ್ಲಿ ಪಾತ್ರವಹಿಸಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರನ್ನು ಬಂಧಿಸಬೇಕು ಅಂತ ನಾನು ಒತ್ತಾಯಿಸುತ್ತೇನೆ ಎಂದಿದ್ದರು.

CM basavaraj bommai

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಛನ್ನಿ ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಪಂಜಾಬ್ ತನ್ನ ಭವಿಷ್ಯದ ಬಗ್ಗೆ ಮುಂದೆ ಚಿಂತಿಸಬೇಕಿದೆ ಎಂದು ಹರಿಹಾಯ್ದಿದ್ದರು.

Share This Article
Leave a Comment

Leave a Reply

Your email address will not be published. Required fields are marked *