– ಜನರ ಪ್ರಾಣಹಾನಿಗೆ ಸಂತಾಪ ಸೂಚಿಸಿದ ಪಿಎಂ
ನವದೆಹಲಿ: ವೆನೆಜುವೆಲಾದಲ್ಲಿ (Venezuela) ಸಂಭವಿಸಿದ ಭೂಕಂಪಕ್ಕೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದು, ಭಾರತದಿಂದ (India) ಅಗತ್ಯ ನೆರವು ನೀಡೋದಾಗಿ ಘೋಷಿಸಿದ್ದಾರೆ.
ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಅವಳಿ ಭೂಕಂಪಗಳ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಭಾರತೀಯರ ಪರವಾಗಿ ವೆನೆಜುವೆಲಾ ಸರ್ಕಾರಕ್ಕೆ ಹಾಗೂ ಅಲ್ಲಿನ ಜನತೆಗೆ, ಪ್ರಮುಖವಾಗಿ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ದುರಂತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ಕಠಿಣ ಸಮಯದಲ್ಲಿ ಭಾರತವು ಸಂತ್ರಸ್ತರೊಂದಿಗೆ ನಿಲ್ಲುತ್ತದೆ ಹಾಗೂ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸನ್ನದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವೆನೆಜುವೆಲಾದಲ್ಲಿ ಪ್ರಬಲ ಅವಳಿ ಭೂಕಂಪ – 164 ಮಂದಿ ಸಾವು, 970 ಕ್ಕೂ ಹೆಚ್ಚು ಮಂದಿಗೆ ಗಾಯ
Deeply saddened by the devastation caused by the severe earthquakes in Venezuela.
On behalf of the people of India, I extend our heartfelt condolences to the Government and people of Venezuela, especially to the families who have lost their loved ones. We pray for the speedy…
— Narendra Modi (@narendramodi) June 25, 2026
ವೆನೆಜುವೆಲಾದಲ್ಲಿ ಸಂಭವಿಸಿದ ಅವಳಿ ಭೂಕಂಪದಿಂದಾಗಿ 164 ಮಂದಿ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸದ್ಯ ವೆನೆಜುವೆಲಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
