ಚಂಡೀಗಢ: ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಬಟಿಂಡಾ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಇದನ್ನೂ ಓದಿ: 12,000 ಕೆಜಿ ತೂಕದ ಬಸ್ಸನ್ನು ಕೂದಲಿನಿಂದ ಎಳೆದ ಭಾರತೀಯ ಮಹಿಳೆ- Video Viral
Advertisement
Advertisement
ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ ಪ್ರಧಾನಿ ಬಂದಿಳಿದರು. ಅವರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಕರೆದೊಯ್ಯಬೇಕಿತ್ತು. ಆದರೆ ಮಳೆ, ಹವಾಮಾನದ ಕಾರಣ 20 ನಿಮಿಷ ಅವರು ಕಾಯಬೇಕಿತ್ತು. ಹವಾಮಾನ ಸುಧಾರಿಸದಿದ್ದ ಕಾರಣ, ರಸ್ತೆಯ ಮಾರ್ಗವಾಗಿ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕೆಂದು ನಿರ್ಧರಿಸಲಾಯಿತು. ಪಂಜಾಬ್ ಪೊಲೀಸರಿಂದ ಅಗತ್ಯ ಭದ್ರತೆಯೊಂದಿಗೆ ರಸ್ತೆಯಲ್ಲಿ ಪ್ರಯಾಣ ಬೆಳೆಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಕಲ್ಪಿಸಲಾಯಿತು.
Advertisement
ಆದರೆ ಬೃಹತ್ ಪ್ರತಿಭಟನೆ ಕಾರಣದಿಂದಾಗಿ ಫ್ಲೈ ಓವರ್‌ನಲ್ಲಿ ಬಳಿ ರಸ್ತೆ ಬ್ಲಾಕ್ ಆಗಿತ್ತು. ಇದರಿಂದ ಸುಮಾರು 20 ನಿಮಿಷಗಳ ಕಾಲ ಪ್ರಧಾನಿ ಮೋದಿ ಅವರು ಫ್ಲೈ ಓವರ್‌ನಲ್ಲೇ ಸಿಲುಕುವಂತಾಯಿತು. ಭದ್ರತಾ ಸಿಬ್ಬಂದಿ ಲೋಪವೇ ಇದಕ್ಕೆ ಕಾರಣ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಕೋವಿಡ್-19 ಮುಂದಿನ ಎರಡು ವಾರ ನಿರ್ಣಾಯಕ – ಭಾರತಕ್ಕೆ WHO ತಜ್ಞರ ಎಚ್ಚರಿಕೆ
Advertisement
ಪ್ರಧಾನಿ ಅವರ ಕಾರ್ಯಕ್ರಮ ವೇಳಾಪಟ್ಟಿ ಮತ್ತು ಪ್ರಯಾಣದ ಯೋಜನೆಯನ್ನು ಪಂಜಾಬ್ ಸರ್ಕಾರಕ್ಕೆ ಮುಂಚಿತವಾಗಿ ತಿಳಿಸಲಾಗಿದೆ. ಕಾರ್ಯವಿಧಾನದ ಪ್ರಕಾರ, ಅಗತ್ಯ ಭದ್ರತೆ ಒದಗಿಸಬೇಕಿತ್ತು. ಆದರೆ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗದ ಕಾರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗದೇ ಪ್ರಧಾನಿ ಅವರು ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು ಎಂದು ಸಚಿವಾಲಯ ಹೇಳಿದೆ.
ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಪಂಜಾಬ್ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.