ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ಮೈಸೂರಿಗೆ ಆಗಮಿಸುತ್ತಿದ್ದು, ಸೋಮವಾರ ನಡೆಯಲಿರೋ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆದ್ರೆ ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ. ಹೀಗಾಗಿ ಪ್ರಧಾನಿ ಹಾಗೂ ಸಿಎಂ ನಡುವಿನ ಸಮರ ಮುಂದುವರೆದಿದ್ಯಾ ಎಂಬ ಪ್ರಶ್ನೆ ಮೂಡಿದೆ.
ಮೈಸೂರಿನಲ್ಲಿ ಫೆಬ್ರವರಿ 19ರಂದು ಹಮ್ ಸಫರ್ ರೈಲು ಸೇರಿದಂತೆ ವಿವಿಧ ರೈಲ್ವೆ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಸರ್ಕಾರಿ ಕಾರ್ಯಕ್ರಮಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ರೂ ಸಿಎಂ ಸಿದ್ದರಾಮಯ್ಯಗೆ ಇನ್ನೂ ಆಹ್ವಾನ ನೀಡಿಲ್ಲ.
ಕೇಂದ್ರ ಸರ್ಕಾರದ ಆಧೀನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಸಿಎಂ ತವರಲ್ಲೇ ಅವರಿಗೆ ಆಹ್ವಾನ ನೀಡಿಲ್ಲ. ಕಡೇ ಕ್ಷಣದಲ್ಲಿ ರೈಲ್ವೇ ಇಲಾಖೆಯಿಂದ ಸಿದ್ದರಾಮಯ್ಯಗೆ ಆಹ್ವಾನ ನೀಡ್ತಾರಾ ಎಂದು ಕಾದು ನೋಡಬೇಕಿದೆ.
ಆದ್ರೆ ಮೋದಿ ಮೈಸೂರಿಗೆ ಬಂದಾಗ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಡಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಮೋದಿ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿರೋದ್ರಿಂದ ಪ್ರೋಟೋಕಾಲ್ ಪ್ರಕಾರ ಸಿದ್ದರಾಮಯ್ಯ ಅವರೇ ಮೋದಿಯನ್ನ ಸ್ವತಃ ಬರಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗ್ತಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮೋದಿಯನ್ನ ಸಿಎಂ ಬರಮಾಡಿಕೊಳ್ಳಲಿದ್ದಾರೆ.
ಮೋದಿ ಅಧಿಕೃತ ಸರ್ಕಾರಿ ಕಾರ್ಯಕ್ರಮದ ಬಗ್ಗೆ ಸಿಎಂ ಕಚೇರಿಗೆ ಮಾಹಿತಿ ರವಾನೆಯಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 18ರಂದು ಭಾನುವಾರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇರಲಿದ್ದು, ಇಬ್ಬರು ದಿಗ್ಗಜರ ಮುಖಾಮುಖಿ ಭೇಟಿ ಕುತೂಹಲ ಮೂಡಿಸಿದೆ.
https://www.youtube.com/watch?v=2MWLOA-Aw5I