– ಅಯೋಧ್ಯೆಯಲ್ಲಿಂದು ಮೋದಿ ಕಾರ್ಯಕ್ರಮಗಳೇನು?
ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ (Ram lalla) ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.
#WATCH | Telangana | Actor Chiranjeevi leaves from Hyderabad for Ayodhya in Uttar Pradesh as Ayodhya Ram Temple pranpratishtha ceremony to take place today.
He says, “That is really great. Overwhelming. We feel it’s a rare opportunity. I feel Lord Hanuman who is my deity, has… pic.twitter.com/FjKoA7BBkQ
— ANI (@ANI) January 22, 2024
Advertisement
ರಾಮಮಂದಿರದ (Ram Mandir) 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿಂದು ರಾಮ ವಿರಾಜಮಾನ – ಬೆಂಗಳೂರಿನಲ್ಲಿ ಹೈ ಅಲರ್ಟ್
Advertisement
Advertisement
ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಸಿಹಿ ತಿಂದು ಸಂಭ್ರಮಿಸಿ – ಚಂಪಾಕಲಿ ರೆಸಿಪಿ ನಿಮಗಾಗಿ
Advertisement
ಅಯೋಧ್ಯೆಯಲ್ಲಿಂದು ಮೋದಿ:
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11 ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್ ಸಾರ್ವಜನಿಕ ಭಾಷಣ
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ
ಖ್ಯಾತ ನಟರ ಆಗಮನ:
ಅಮಿತಾಬ್ ಬಚ್ಚನ್, ಚಿರಂಜೀವಿ, ರಾಮ್‌ಚರಣ್, ಪವನ್ ಕಲ್ಯಾಣ್ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಕ್ರೀಡಾ ತಾರೆ ಸಚಿನ್ ತೆಂಡೂಲ್ಕರ್, ವೆಂಕಟೇಶ್ ಪ್ರಸಾದ್, ಆರ್.ಅಶ್ವಿನ್, ಸೈನಾ ನೆಹ್ವಾಲ್ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ಗಣ್ಯರ ಸಮ್ಮುಖದಲ್ಲಿ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.