ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ ದೆಹಲಿಯಲ್ಲಿ ಸಂಸತ್ ಭವನ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿದರು.
Advertisement
ಅಮೆರಿಕಾಗೆ ಭೇಟಿ ಕೊಟ್ಟ ಮೋದಿ ಭಾನುವಾರ ದೆಹಲಿಗೆ ಮರಳಿದ್ದರು. ರಾತ್ರಿ ದೆಹಲಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸಂಸತ್ ಭವನಕ್ಕೆ ಭೇಟಿ ಕೊಟ್ಟಿದ್ದು, ಪ್ರಗತಿಯಲ್ಲಿರುವ ಕೆಲಸದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೋದಿ ಅವರು ಸುರಕ್ಷಣಾ ಹೆಲ್ಮೆಟ್ ಜೊತೆಗೆ ಬಿಳಿ ಕುರ್ತಾ ಹಾಕಿಕೊಂಡು ಕಾರ್ಮಿಕರ ಜೊತೆ ಮಾತನಾಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್
Advertisement
ಮೋದಿ ಅವರು ಸುಮಾರು 8.45 ರಾತ್ರಿ ಸ್ಥಳಕ್ಕೆ ಭೇಟಿ ನೀಡಿದ್ದು, ಸುಮಾರು ಒಂದು ಗಂಟೆಗಳ ಕಾಲ ಸ್ಥಳದಲ್ಲಿದ್ದರು.
Advertisement
ಈ ಸಂಸತ್ ಭವನವು 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡವಾಗಿದೆ. ಈ ಭವನ 2022 ರ ವೇಳೆಗೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಇದನ್ನೂ ಓದಿ: ತರಕಾರಿ ಸುರಿದು ರೈತರ ಆಕ್ರೋಶ – ಜಿಲ್ಲೆಗಳಲ್ಲಿ ಪ್ರತಿಭಟನೆ ಆರಂಭ
Advertisement
ಮೂರು ದಿನಗಳ ಅಮೆರಿಕ ಪ್ರವಾಸದ ಆರಂಭದಲ್ಲಿ ಕ್ವಾಡ್ ಶೃಂಗ ಸಭೆಯಲ್ಲಿ ಭಾಗವಹಿಸಿ ಬಳಿಕ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದರು. ಭಾರತಕ್ಕೆ ಮರಳಿದ ಬಳಿಕ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಭವನದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.