– ದೇಶದ ಪ್ರಗತಿಗೆ ವಿದ್ಯಾವಂತ ಪ್ರಧಾನಿ ಅಗತ್ಯ
– ಜೈಲಿನಿಂದಲೇ ಸಿಸೋಡಿಯಾ ಪತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಶೈಕ್ಷಣಿಕ ಅರ್ಹತೆಯ ಕೊರತೆ ದೇಶಕ್ಕೆ ಅಪಾಯಕಾರಿಯಾಗಿದೆ ಎಂದು ದೆಹಲಿಯ (Delhi) ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ದೇಶದ ಜನರನ್ನುದ್ದೇಶಿಸಿ ಪತ್ರ ಬರೆದಿದ್ದಾರೆ.
Advertisement
ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸಿಸೋಡಿಯಾ ತಿಹಾರ್ ಜೈಲಿನಿಂದಲೇ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದ್ಯಾರ್ಹತೆ ಬಗ್ಗೆ ಸವಾಲೆಸೆದಿರುವ ಸಿಸೋಡಿಯಾ ದೇಶದ ಪ್ರಗತಿಗೆ ವಿದ್ಯಾವಂತ ಪ್ರಧಾನಿ ಅಗತ್ಯ ಎಂದು ಹೇಳಿದ್ದಾರೆ.
Advertisement
Advertisement
ಈ ಪತ್ರವನ್ನು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ತಿಳಿಸಿರುವ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ದೇಶದ ಜನತೆಗೆ ಜೈಲಿನಿಂದ ಪತ್ರ ಬರೆದಿದ್ದಾರೆ. ಪ್ರಧಾನಿಯ ಶೈಕ್ಷಣಿಕ ಅರ್ಹತೆಯ ಕೊರತೆ ದೇಶಕ್ಕೆ ತುಂಬಾ ಅಪಾಯಕಾರಿ. ಮೋದಿ ಅವರಿಗೆ ವಿಜ್ಞಾನ ಅರ್ಥವಾಗಲ್ಲ. ಅವರಿಗೆ ಶಿಕ್ಷಣದ ಮಹತ್ವವೇ ಅರ್ಥವಾಗಲ್ಲ. ಕಳೆದ ಕೆಲವು ವರ್ಷಗಳಲ್ಲಿ ಸುಮಾರು 60,000 ಶಾಲೆಗಳು ಮುಚ್ಚಲ್ಪಟ್ಟಿವೆ. ಭಾರತದ ಪ್ರಗತಿಗೆ ಒಬ್ಬ ವಿದ್ಯಾವಂತ ಪ್ರಧಾನಿ ಇರುವುದು ಅಗತ್ಯ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗೋಕಾಕ್ ಸಾಹುಕಾರ್‌ಗೆ ಸೈಲೆಂಟಾಗಿ ಪಂಚ್ ಕೊಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
Advertisement
मनीष सिसोदिया ने जेल से देश के नाम चिट्ठी लिखी –
प्रधानमंत्री का कम पढ़ा-लिखा होना देश के लिए बेहद ख़तरनाक
मोदी जी विज्ञान की बातें नहीं समझते
मोदी जी शिक्षा का महत्व नहीं समझते
पिछले कुछ वर्षों में 60,000 स्कूल बंद किए
भारत की तरक़्क़ी के लिए पढ़ा-लिखा पीएम होना ज़रूरी pic.twitter.com/VpPyY1Jr2v
— Arvind Kejriwal (@ArvindKejriwal) April 7, 2023
ಇದೀಗ ರದ್ದಾಗಿರುವ ದೆಹಲಿಯ ಅಬಕಾರಿ ನೀತಿ 2021-22ರ ರಚನೆ ಹಾಗೂ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿರುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 16ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು. ಇದನ್ನೂ ಓದಿ: ಮಂಡ್ಯದಲ್ಲಿ ಈಗ ಪುರುಷರ ಪಾರುಪತ್ಯ- ಹಿಂದೆ ಮಹಿಳೆಯರದ್ದೆ ಗದ್ದುಗೆ