– ದೆಹಲಿ ರಾಜ್‌ಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಗೌರವ ನಮನ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Gandhi Jayanti) ಅವರ 154ನೇ ಜಯಂತಿ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯ ರಾಜ್‌ಘಾಟ್‌ಗೆ ತೆರಳಿ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು.
Advertisement
ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ. ಏಕತೆ ಮತ್ತು ಸಹಾನುಭೂತಿಯನ್ನು ಉತ್ತೇಜಿಸಲು ಪ್ರಪಂಚದಾದ್ಯಂತ ಜನರನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಿ ಹೇಳಿದರು. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ಸ್ವಚ್ಛಾಂಜಲಿ ಅರ್ಪಿಸಿದ ಮೋದಿ
Advertisement
I bow to Mahatma Gandhi on the special occasion of Gandhi Jayanti. His timeless teachings continue to illuminate our path. Mahatma Gandhi’s impact is global, motivating the entire humankind to further the spirit of unity and compassion. May we always work towards fulfilling his…
— Narendra Modi (@narendramodi) October 2, 2023
Advertisement
ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಅವರು, ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ. ಮಹಾತ್ಮ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ. ಇಡೀ ಮಾನವಕುಲವನ್ನು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲು ಪ್ರೇರೇಪಿಸುತ್ತದೆ.
Advertisement
ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ. ಅವರ ಆಲೋಚನೆಗಳು ಪ್ರತಿಯೊಬ್ಬ ಯುವಕನು ತಾನು ಕನಸು ಕಂಡ ಬದಲಾವಣೆಯ ಏಜೆಂಟ್ ಆಗಲು ಸಾಧ್ಯವಾಗಲಿ. ಎಲ್ಲದರಲ್ಲೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೋದಿಯೊಂದಿಗೆ ಸ್ವಚ್ಛಾಂಜಲಿಯಲ್ಲಿ ಭಾಗಿಯಾಗಿದ್ದ ಅಂಕಿತ್ ಬೈಯನ್‍ಪುರಿಯಾ ಯಾರು?
ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಭಾನುವಾರ ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದರು.
Web Stories