ಮೈಸೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ನ್ಯಾಯಾಲಯದ ನಿವೃತ್ತ ಗುಮಾಸ್ತನೊಬ್ಬನನ್ನು ಟಿ.ನರಸೀಪುರ ಪೊಲೀಸರು (Police) ಬಂಧಿಸಿದ್ದಾರೆ.
ಟಿ.ನರಸೀಪುರ (T. Narasipura) ಪಟ್ಟಣದ ಹೌಸಿಂಗ್ ಬೋರ್ಡ್‍ನ ನಿವಾಸಿ ಜಗದೀಶ್ ಬಂಧಿತ ಆರೋಪಿಯಾಗಿದ್ದಾನೆ. ಆತ ಪಟ್ಟಣದ ನ್ಯಾಯಾಲಯದಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ. ಆರೋಪಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅಲ್ಲದೇ ಈ ವಿಚಾರ ಪೋಷಕರಿಗೆ ತಿಳಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ ಎಂಬ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರು ಅಡ್ಡಗಟ್ಟಿ 50 ಲಕ್ಷ ರೂ. ಹಣ ದೋಚಿದ ಕಿಡಿಗೇಡಿಗಳು