ಕಾರವಾರ: ಪೋಕ್ಸೋ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಹಡೀಲ್ ಸುಬ್ಬತ್ತಿಯಲ್ಲಿ ನಡೆದಿದೆ.
ನಾರಾಯಣ ನಾಯ್ಕ (64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು ಈತನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ 2014 ರಲ್ಲಿ ಪೋಕ್ಸೋ ಕಾಯ್ದೆಯಡಿ(POCSO Act) ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ
ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿತ್ತು. ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.