– ಸೆ.19ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ (Pocso Case) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ (High court) ವಿಭಾಗೀಯ ಪೀಠ ಸೆ.19ಕ್ಕೆ ಮುಂದೂಡಿದೆ.
Advertisement
ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿತು.
Advertisement
ಏನಿದು ಪ್ರಕರಣ?
ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.
Advertisement
Advertisement
ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್‍ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.
ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್‍ವೈ ನ್ಯಾಯಾಲಯದ ಮೊರೆ ಹೋಗಿದ್ದರು.