Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು

Bengaluru City

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು

Public TV
Last updated: November 26, 2025 11:09 am
Public TV
Share
3 Min Read
MURUGHA SHREE
SHARE

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ (Murughashree) ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ.

2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ (POCSO Case) ವಿಚಾರಣೆ ನಡೆಸಲಾಗಿದೆ.

MURUGHA SHREE 1

ಈ ಕೇಸ್ ಅಂತಿಮಘಟ್ಟಕ್ಕೆ ಬಂದು ತಲುಪಿದ್ದು, ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ತೀರ್ಪು ಹೊರಬೀಳಲಿದೆ. ಹೀಗಾಗಿ ಮುರುಘಾಶ್ರೀ ಸೇರಿದಂತೆ ಬೆಂಬಲಿಗರು ಹಾಗೂ ಭಕ್ತರಲ್ಲಿ ಟೆನ್ಷನ್ ಶುರುವಾಗಿದೆ. ಹಾಗೆಯೇ ಸಂತ್ರಸ್ತೆಯರ ಕುಟುಂಬದಲ್ಲೂ ಆತಂಕ ಮನೆ ಮಾಡಿದ್ದು, ಎಲ್ಲರಚಿತ್ತ ನ್ಯಾಯಾಲಯದ ತೀರ್ಪಿನತ್ತ ನೆಟ್ಟಿದೆ.

ಏನಿದು ಪ್ರಕರಣ?
ಚಿತ್ರದುರ್ಗದ (Chitradurga) ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು.

CHITRADURGA MURUGHA SHREE HOSPITAL

ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇನ್ನೂ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.

2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.

ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ ಸಿಕ್ಕಿತ್ತು.

TAGGED:ChitradurgamurughashreePOCSO caseಚಿತ್ರದುರ್ಗಬೆಂಗಳೂರುಮುರುಘಾ ಶ್ರೀಮೈಸೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?