ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ (POCSO Case) ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ (Muruga Shree) ಕೋರ್ಟ್ ಜಾಮೀನು ಮಂಜೂರು ಮಾಡಿದೆ
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ (Chitradurga) ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.ಇದನ್ನೂ ಓದಿ: ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ಸುಪ್ರೀಂನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.
ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ.
ಸಂತ್ರಸ್ತೆಯರಿಬ್ಬರು ಸೇರಿ 12 ಜನ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕೋರ್ಟ್‌ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ ಮುರುಘಾಶ್ರೀ ಬಿಡುಗಡೆಯಾಗಿ ದಾವಣಗೆರೆಗೆ ತೆರಳುವ ಸಾಧ್ಯತೆಯಿದೆ.ಇದನ್ನೂ ಓದಿ: ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ ಆಗಬೇಕು ಅಂತಾ ಆಸೆ ಇರುತ್ತೆ: ಸತೀಶ್ ಜಾರಕಿಹೊಳಿ