ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
Advertisement
Advertisement
ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ. 41(O) ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನಷ್ಟೇ ಅರ್ಜಿ ವಿಚಾರಣೆಗೆ ಬರಬೇಕಿದೆ. ಈ ಬೆನ್ನಲ್ಲೇ ಸರ್ಕಾರದ ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯ್ಕ್ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement
Advertisement
ಈ ಪ್ರಕರಣದ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ತನಿಖೆ ನಡೆಯುತ್ತಿದೆ. ಸಿಐಡಿಯಿಂದ ತನಿಖೆ ಪ್ರಗತಿಯಲ್ಲಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಸದ್ಯ ಪಕ್ಷದ ಕಾರ್ಯನಿಮಿತ್ತ ದೆಹಲಿಗೆ ತೆರಳಿರುವ ಯಡಿಯೂರಪ್ಪ ಅವರು ಜೂನ್ 17ರಂದು ರಾಜ್ಯಕ್ಕೆ ಬರುವ ಮಾಹಿತಿಯಿದೆ. ಆದ್ದರಿಂದ ತಮ್ಮ ವಕೀಲರ ಮೂಲಕ ಸಿಐಟಿ ನೋಟಿಸ್ ಉತ್ತರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.