ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಹಿಂದೂ ಧರ್ಮ ಒಡೆಯುವುದು, ಮತಾಂತರ ಮಾಡುವುದೇ ಒಡನಾಡಿಯ ಉದ್ದೇಶ: ಮಠದ ಸದಸ್ಯ ಕಿಡಿ
Advertisement
Advertisement
ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 3ನೇ ಆರೋಪಿ ಮಠದ ಉತ್ತರಾಧಿಕಾರಿ (ಬಸವಾದಿತ್ಯ), 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
Advertisement
Advertisement
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ನಾಳೆ ಆಕ್ಷೇಪಣೆ ಸಲ್ಲಿಕೆಗೆ ಕೋರ್ಟ್ ಸೂಚಿಸಿದೆ ಎಂದು ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಮುರುಘಾ ಶ್ರೀ ಜೈಲಿಗೆ