ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ (POCSO Case) ಆರೋಪಿಯಾಗಿರುವ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಚಾಟನೆಗೊಂಡಿರುವ ವಚನಾನಂದ ಸ್ವಾಮೀಜಿ (Vachanananda Swamiji) ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ರೆಗ್ಯುಲರ್ ಜಾಮೀನು (Regular Bail) ಕೋರಿ ಅರ್ಜಿ ಸಲ್ಲಿಸಿದ್ದಾರೆ.
ವಚನಾನಂದ ಸ್ವಾಮೀಜಿ ತಮ್ಮ ವಕೀಲ ಎಸ್.ವಿ. ಪಾಟೀಲ್ ಹಾಗೂ ಭಕ್ತರೊಂದಿಗೆ ಖುದ್ದು ನ್ಯಾಯಾಲಯಕ್ಕೆ ಆಗಮಿಸಿ ಜಾಮೀನು ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ- ದೊಡ್ಡವರ ವಿರುದ್ಧ ಶೀಘ್ರವೇ ಎಫ್‌ಐಆರ್ ಸಾಧ್ಯತೆ
ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ಸಿನಿಮಾ ಮೀರಿಸೋ ಲವ್ ಟ್ರ್ಯಾಜಿಡಿ – 6 ವರ್ಷಗಳ ಪ್ರೇಮ ಪ್ರಿಯಕರನ ಸಾವಿನಲ್ಲಿ ಅಂತ್ಯ!
ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ, ಆ ಜಾಮೀನನ್ನು ರದ್ದುಪಡಿಸುವಂತೆ ಸಂತ್ರಸ್ತ ಬಾಲಕನ ತಾಯಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಅಫ್ಘಾನ್‌ನಲ್ಲಿ 6.2 ತೀವ್ರತೆಯ ಭೂಕಂಪ; ದೆಹಲಿ, ಜಮ್ಮು-ಕಾಶ್ಮೀರ, ಪಾಕ್‌ನಲ್ಲೂ ಕಂಪಿಸಿದ ಭೂಮಿ
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಚನಾನಂದ ಸ್ವಾಮೀಜಿಯ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿ, ರೆಗ್ಯುಲರ್ ಜಾಮೀನು ಪಡೆಯಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಅದರಂತೆ ಇದೀಗ ವಚನಾನಂದ ಸ್ವಾಮೀಜಿ ದಾವಣಗೆರೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದು, ರೆಗ್ಯುಲರ್ ಬೇಲ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಭಕ್ತಸಾಗರ – ಒಂದೇ ದಿನ 81 ಸಾವಿರಕ್ಕೂ ಅಧಿಕ ಜನರಿಂದ ದರ್ಶನ
