Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸೆಪ್ಟೆಂಬರ್‌ನಿಂದ ಪೋಡಿ ಅಭಿಯಾನಕ್ಕೆ ಚಾಲನೆ: ಕೃಷ್ಣ ಬೈರೇಗೌಡ

Public TV
Last updated: August 12, 2024 10:10 pm
Public TV
Share
10 Min Read
Krishna Byre Gowda
SHARE

– ರೈತರಿಗೆ ನೆಮ್ಮದಿಯ ಬದುಕು ಕಲ್ಪಿಸುವುದೇ ಸರ್ಕಾರದ ಸಂಕಲ್ಪ

ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ (Podi Campaign) ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byregowda) ಹೇಳಿದ್ದಾರೆ.

ವಿಕಾಸಸೌಧದದಲ್ಲಿ (Vidhana Soudha) ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ. ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಭರವಸೆ ನೀಡಿದ್ದಾರೆ.

ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆಪ್ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದುರಸ್ತಿ ಕೆಲಸವನ್ನು ಕಾಗದದಲ್ಲಿ ಕಾರ್ಯಗತಗೊಳಿಸಿದರೆ ನಮಗೂ ಯಾವುದೇ ಲೆಕ್ಕ ಸಿಗುವುದಿಲ್ಲ. ತಳಮಟ್ಟದ ಅಧಿಕಾರಿಗಳ ಇಚ್ಚೆಯಂತೆಯೇ ಕೆಲಸ ನಡೆಯುತ್ತೇ ವಿನಃ ಜನರಿಗೆ ನ್ಯಾಯ ಸಿಗಲ್ಲ. ಇದೇ ಕಾರಣಕ್ಕೆ ಡಿಜಿಟಲ್ ಆಪ್ ಮೂಲಕ ದುರಸ್ತಿ ಕೆಲಸಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. 1 – 5 ಹಾಗೂ 6 – 10 ಪೋಡಿ ದುರಸ್ಥಿ ಪ್ರಕರಣ ಬಾಕಿ ಇರುವ ಎಲ್ಲಾ ತಾಲೂಕುಗಳಲ್ಲೂ ನಾವೇ ಹುಡುಕಿ ದಾಖಲೆ ಕಡತ ಸಿದ್ದಪಡಿಸಬೇಕು ಎಂದು ತೀರ್ಮಾನಿಸಿದ್ದೇವೆ. ಹಾಸನದಲ್ಲಿ ಈಗಾಗಲೇ ಪ್ರಾಯೋಗಿಕ ಯೋಜನೆ ನಡೆಯುತ್ತಿದೆ. ಇದರ ಆಧಾರದ ಮೇಲೆ ಸೆಪ್ಟೆಂಬರ್ ತಿಂಗಳಿನಿಂದ ಜನರ ಅರ್ಜಿಗೆ ಕಾಯದೆ ನಾವೇ ಸ್ವಯಂ ಪ್ರೇರಣೆಯಿಂದ ಅಭಿಯಾನದ ಮಾದರಿಯಲ್ಲಿ 1 – 5 ಹಾಗೂ 6 – 10 ಪೋಡಿ ದುರಸ್ಥಿ ಮಾಡಲಿದ್ದೇವೆ ಎಲ್ಲಾ ಮಂಜೂರಿದಾರರ ಪರವಾಗಿ ನಾವೇ ಪ್ರಕ್ರಿಯೆ ಆರಂಭಿಸಲಿದ್ದು, ಇದರಿಂದ ಲಕ್ಷಾಂತರ ಜನರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡದಂತಾಗುತ್ತದೆ. ಪ್ರಕರಣಗಳ ಇತ್ಯರ್ಥಪಡಿಸಲು ಎಷ್ಟೇ ಕಾನೂನುಗಳನ್ನು ಅಳವಡಿಸಿದರೂ ಅವುಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರಿಗಳು ಬಳಸಿಕೊಂಡು ಜನಸಾಮಾನ್ಯರಿಗೆ ಕಿರಿಕಿರಿ ಮಾಡುತ್ತಿದ್ದಾರೆ. ಕೆಲವೆಡೆ 50 ಎಕರೆ ಪೋಡಿ ಮಾಡಿಕೊಡಿ ಎಂದರೆ 100 ಎಕರೆ ಮಾಡಿಕೊಟ್ಟಿದ್ದಾರೆ. ಬಡ ರೈತನೊಬ್ಬ ತಾನು ಮಾಡುತ್ತಿರುವ ಸಾಗುವಳಿ ಭೂಮಿಗೆ ದಾಖಲೆಗಳನ್ನು ಮಾಡಿಕೊಳ್ಳಲು ಹೊರಟರೆ ಆತನನ್ನು ಅಲೆದಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇದಕ್ಕೆಲ್ಲಾ ಇತಿಶ್ರೀ ಹಾಡುವ ಉದ್ದೇಶದಿಂದಲೇ ಪೋಡಿ ಅಭಿಯಾನ ಆರಂಭಿಸಿದ್ದೇವೆ, ಈ ಸಂದರ್ಭದಲ್ಲಿ ಇಲಾಖಾ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಚೌಕಟ್ಟನಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಾವು ನಿಮ್ಮ ಮೇಲೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದ್ದೇನೆ. ಲ್ಯಾಂಡ್ ಬೀಟ್ ಆಪ್ ಆಧರಿಸಿ ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು. ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್ ಬೀಟ್ ಆಪ್ ಮೂಲಕ ತಿಳಿದುಬಂದಿದೆ. ಕಳೆದ ಎಂಟು ತಿಂಗಳಿನಿಂದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಅವರ ಸರ್ಕಲ್ ನಲ್ಲಿ ಇರುವ ಸರ್ಕಾರಿ ಜಮೀನು ಎಷ್ಟಿವೆ? ಎಂದು ಲ್ಯಾಂಡ್ ಬೀಟ್ ಆಪ್ ನಲ್ಲಿ ಅಪ್‌ಲೋಡ್ ಮಾಡಲು ಹೇಳಿದ್ದೆವು. ಅದು ಅಪ್‌ಲೋಡ್ ಆದ ಮೇಲೆ ಈ ಲೆಕ್ಕ ಸಿಕ್ಕಿವೆ. ಈಗ ನಮ್ಮ ಬಳಿ ಜಿಲ್ಲಾವಾರು, ತಾಲೂಕವಾರು ಹಾಗೂ ಗ್ರಾಮವಾರು ಸರ್ವೇ ನಂಬರ್- ಲೊಕೇಷನ್ ಮತ್ತು ವಿಸ್ತೀಣದ ಮಾಹಿತಿ ಲಭ್ಯವಾಗಿದೆ. ಮೊದಲ ಹಂತದ ಕೆಲಸ ಮುಕ್ತಾಯವಾಗಿದ್ದು, ಎರಡನೇ ಹಂತದಲ್ಲಿ ಮಾರ್ಚ್ ತಿಂಗಳಿನಿಂದ 14 ಲಕ್ಷ ಸರ್ವೇ ನಂಬರ್‍ಗೆ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಖುದ್ದು ಬೀಟ್ ಮಾಡಿಸಿದ್ದೇವೆ. 13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆಪ್ ನಲ್ಲಿ ನಮೂದಿಸಿದ್ದಾರೆ. ಈಗಾಗಲೇ 90% ರಷ್ಟು ಜಾಗ ಸ್ಪಾಟ್ ವಿಸಿಟ್ ಆಗಿದೆ, ಹಲವೆಡೆ ಒತ್ತುವರಿ ಇರುವುದು ಗೊತ್ತಾಗಿದ್ದು ಸೆಪ್ಟೆಂಬರ್ ತಿಂಗಳಿನಿಂದ ರೈತರ ಭೂಮಿ ಬಿಟ್ಟು ಉಳಿದ ಎಲ್ಲಾ ಒತ್ತುವರಿಯನ್ನೂ ತಹಶೀಲ್ದಾರ್ ಮೂಲಕ ತೆರವುಗೊಳಿಸಲಾಗುವುದು. ಮುಖ್ಯವಾಗಿ ಕೆರೆ-ಸ್ಮಶಾನ ಜಾಗವನ್ನು ಸರ್ವೇ ನಡೆಸಲಾಗುವುದು. ಈಗಾಗಲೇ 2.68 ಕೋಟಿ ರೈತರ ಆಧಾರ್ ಸೀಡಿಂಗ್ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್ ಜೊತೆಗೆ ಆರ್‌ಟಿಸಿ ಲಿಂಕ್ ಮಾಡಲಾಗಿದೆ. 65% ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ 90% ರಷ್ಟು ಕೆಲಸ ಮುಗಿಸುವ ಗುರಿ ಹೊಂದಲಾಗಿದೆ. ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ರೂ ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್ ಸೀಡಿಂಗ್‍ನಿಂದ ತಿಳಿದುಬಂದಿದೆ. ಹೀಗಾಗಿ ಎರಡು ತಿಂಗಳ ನಂತರ ಅದಾಲತ್ ಮೂಲಕ ಫೌತಿಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್ ಸೀಡಿಂಗ್‍ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು, ಬಿಟ್ಟುಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ, ಒತ್ತುವರಿಯಾದದ್ದೂ ಗೊತ್ತಾಗಿದೆ. ಜಮೀನಿಗೆ ಆಧಾರ್ ಲಿಂಕ್ ಮಾಡುವಾಗ 2.20 ಲಕ್ಷ ಜಮೀನು ಸರ್ಕಾರಿ ಭೂಮಿ ಎಂದು ಗುರುತಿಸದ ಭೂಮಿ ಇವೆ ಎಂದು ತಿಳಿದುಬಂದಿದೆ. ಆಧಾರ್ ಸೀಡಿಂಗ್ ಮುಗಿಯುವುದರ ಒಳಗಾಗಿ 3 ರಿಂದ 3.50 ಲಕ್ಷ ಹೆಚ್ಚುವರಿ ಸರ್ಕಾರಿ ಭೂಮಿ ಲೆಕ್ಕಕ್ಕೆ ಬರುವ ಸಾಧ್ಯತೆ ಇದೆ. ಪ್ರಸಕ್ತ ಮುಂಗಾರಿನ ಅವಧಿಯಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಮಳೆಯ ಕಾರಣಕ್ಕೆ ಹಲವೆಡೆ ಒಟ್ಟಾರೆ 80,000 ಹೆಕ್ಟೇರ್ ಬೆಳೆ ನಾಶವಾಗಿದ್ದು, ಈ ವಾರದೊಳಗಾಗಿ ರೈತರಿಗೆ ಪರಿಹಾರ ನೀಡಲಾಗುವುದು. ಪ್ರಸಕ್ತ ಸಾಲಿನ ಮಳೆ ಪ್ರಮಾಣದ ವಿವರ, ಮಳೆಹಾನಿ ಹಾಗೂ ಇಲಾಖೆ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ನೀಡಿದ ಅವರು, ಉತ್ತರ ಒಳನಾಡಿನಲ್ಲಿ ವಾಡಿಕೆ ಪ್ರಕಾರ 260 ಮಿ.ಮೀ ಮಳೆಯಾಗಬೇಕು ಆದರೆ, ಪ್ರಸ್ತುತ 322 ಮಿ.ಮೀ ಮಳೆಯಾಗಿದೆ. ಅಂದರೆ ವಾಡಿಕೆಗಿಂತ 24% ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಭಾಗದಲ್ಲಿ 1127 ಮಿ.ಮೀ ವಾಡಿಕೆ ಮಳೆ ಪ್ರಮಾಣವಾಗಿದ್ದು, ಪ್ರಸ್ತುತ 1361 ಮಿ.ಮೀ ಅಂದರೆ ಶೇ.21ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವಾಡಿಕೆಯ ಮಳೆ 2299 ಮಿ.ಮೀ ಆಗಿದ್ದು, ಪ್ರಸ್ತುತ 2947 ಮಿ.ಮೀ ಅಂದರೆ ಶೇ.28 ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ಸರಾಸರಿ ಮಳೆಯ ಪ್ರಮಾಣ 553 ಮಿ.ಮೀ ಆಗಿದ್ದು, ಪ್ರಸ್ತುತ 699 ಮಿ.ಮೀ ಮಳೆಯಾಗಿದ್ದು, ಈ ಪ್ರಮಾಣ 26%ರಷ್ಟು ಹೆಚ್ಚು. ವಿಶೇಷವೆಂದರೆ ಈ ವರ್ಷ ಯಾವ ಜಿಲ್ಲೆಯಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಕೊರತೆ ಎದುರಾಗಿತ್ತು. ಕೋಲಾರ ಚಿಕ್ಕಬಳ್ಳಾಪುರ ಯಾದಗಿರಿ ಕೊಪ್ಪಳ, ವಿಜಯಪುರ, ರಾಯಚೂರು ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಆದರೆ, ಕಳೆದ 10 ದಿನಗಳ ಹಿಂದೆ ಆ ಭಾಗಗಳಲ್ಲೂ ಸಹ ಉತ್ತಮ ಮಳೆಯಾಗಿದೆ. ಅಲ್ಲದೆ, ಆಗಸ್ಟ್ 16 ರಿಂದ ಮುಂಗಾರು ಮತ್ತೆ ಚುರುಕಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಂಗಾರಿನ ಪ್ರಭಾವ ಉತ್ತಮವಾಗಿರುವ ಬಗ್ಗೆ ಮಾಹಿತಿ ಇದೆ. ಈ ವರ್ಷ ವಾಡಿಕೆಗಿಂತ ಭಿತ್ತನೆಯೂ ಹೆಚ್ಚಾಗಿದ್ದು, ಒಳ್ಳೆಯ ಕೃಷಿ ಚಿತ್ರಣ ಕಾಣುವ ನಿರೀಕ್ಷೆ ಇದೆ. ಇದಲ್ಲದೆ, ಮುಂಗಾರಿನ ಪ್ರಭಾವ ಇನ್ನೂ ಒಂದೂವರೆ ತಿಂಗಳು ಇರಲಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನಿಂದ ಮಧ್ಯ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ಹಾಗೂ ಕೃಷ್ಣ-ಕಾವೇರಿ ನದಿಪಾತ್ರದ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಈ ಎಲ್ಲಾ ಭಾಗದಲ್ಲೂ ಅನಗತ್ಯ ನೆರೆಸ್ಥಿತಿಯನ್ನು ತಡೆಯಲು ಮುಂಜಾಗ್ರತಾ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಮಳೆಯಾಗುವ ಸಂದರ್ಭದಲ್ಲಿ ನದಿ ಉಕ್ಕಿಹರಿಯುತ್ತದೆ, ಇದೇ ವೇಳೆ ಅಣೆಕಟ್ಟೆಗಳಿಂದಲೂ ನೀರು ಹರಿಸಿದರೆ ಪ್ರವಾಹ ಸ್ಥಿತಿ ಉಂಟಾಗಿ ಜನ ಪರಿತಪಿಸುವ ಸ್ಥಿತಿ ಎದುರಾಗುತ್ತದೆ. ಹೀಗಾಗಿ ಅಣೆಕಟ್ಟೆಗಳು ತುಂಬುವವರೆಗೂ ಕಾಯದೆ ಜಲಾಶಯಗಳ ಒಳಹರಿವನ್ನು ನಿಯಮಿತವಾಗಿ ಬಿಡುಗಡೆ ಮಾಡುವ ಮೂಲಕ ನೆರೆಯನ್ನು ನಿಯಂತ್ರಿಸಬಹುದು. ಈ ಮಾದರಿಯ ನೀರಿನ ನಿರ್ವಹಣೆ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಶಿಥಿಲಾವಸ್ಥೆಯಲ್ಲಿರುವ ಶಾಲೆಗಳು ಹಾಗೂ ಗುಡ್ಡದ ಅಂಚಿನಲ್ಲಿ ಕುಸಿದುಬೀಳುವ ಸಾಧ್ಯತೆಗಳಿರುವ ಮನೆಗಳನ್ನು ಗುರುತಿಸಿ ಜನವಾಸ ನಿಷೇಧಿಸಲು ಹಾಗೂ ಜನರನ್ನು ಸುರಕ್ಷಿತವಾಗಿ ಕಾಳಜಿ ಕೇಂದ್ರಕ್ಕೆ ರವಾನಿಸುವಂತೆಯೂ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.ಪ್ರಸ್ತುತ ಮಳೆಗಾಲದಲ್ಲಿ ಉಂಟಾಗಿರುವ ಜೀವಹಾನಿಯ ಬಗ್ಗೆಯೂ ಮಾಹಿತಿ ನೀಡಿದ ಸಚಿವರು, ಈ ವರ್ಷ ಪ್ರಾಣಹಾನಿಯ ಸಂಖ್ಯೆಯನ್ನೂ ನಿಯಂತ್ರಿಸಲಾಗಿದೆ. 2019ರಲ್ಲಿ ಇದೇ ದಿನಕ್ಕೆ 67 ಜನ ಮೃತಪಟ್ಟಿದ್ದರು. 2022ರ ಮಳೆಗಾಲದಲ್ಲಿ 75 ಜನ ಮೃತಪಟ್ಟಿದ್ದರು. ಆದರೆ, ಈ ವರ್ಷ 58 ಜನ ಮೃತಪಟ್ಟಿದ್ದು, ಸರ್ಕಾರದ ಮುಂಜಾಗ್ರತಾ ಕ್ರಮಗಳಿಂದಾಗಿ ಸಾವಿನ ಸಂಖ್ಯೆಯನ್ನು ಇಳಿಸಲಾಗಿದೆ. ಆದರೂ, ಯಾವುದೇ ಜೀವಕ್ಕೂ ಒಂದು ಮೌಲ್ಯವಿದೆ. ಪ್ರತಿಯೊಬ್ಬರ ಜೀವವನ್ನು ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜೀವಹಾನಿಯಂತಹ ಅನಾಹುತ ತಪ್ಪಿಸಲು ಮತ್ತಷ್ಟು ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಆಗಸ್ಟ್ 15ನೇ ತಾರೀಖಿನ ನಂತರ ಮಲೆನಾಡು ಕರಾವಳಿ, ಕಾವೇರಿ-ಕೃಷ್ಣ ಜಲಾಶಯ ಪಾತ್ರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆವಹಿಸಲಾಗಿದೆ. ಅಲ್ಲದೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮಹತ್ವದ ಸಭೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು. ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ವರ್ಷ ಬೆಳೆಹಾನಿ ಪ್ರಮಾಣವನ್ನು ನಿಯಂತ್ರಿಸಲಾಗಿದೆ. 2020ರಲ್ಲಿ 2.21ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿತ್ತು. 2021ರಲ್ಲಿ 2.12 ಲಕ್ಷ ಹೆಕ್ಟೇರ್ ಹಾಗೂ 2022 ರಲ್ಲಿ 1.53 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆದರೆ, ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ 80,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಇನ್ನೂ ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನು ನಿರ್ವಹಣೆ ಮಾಡಲಾಗುತ್ತದೆ ಎಂದಿದ್ದಾರೆ.

ಪ್ರಸಕ್ತ ಸಾಲಿನ ಮಳೆಗಾಲದಲ್ಲಿ 1126 ಮನೆಗಳು ಸಂಪೂರ್ಣ ಕುಸಿದಿದ್ದರೆ, ಅನಧೀಕೃತವಾಗಿ ನಿರ್ಮಿಸಲಾಗಿರುವ 75 ಮನೆಗಳೂ ಕುಸಿದಿವೆ. ಇದಲ್ಲದೆ, 1176 ಮನೆಗಳು ತೀವ್ರ ಹಾನಿಗೆ ಒಳಗಾಗಿದ್ದರೆ, 2338 ಮನೆಗಳು ಭಾಗಶಃ ಹಾನಿಯಾಗಿವೆ. ಒಟ್ಟಾರೆ 8,000 ಮನೆಗಳು ಹಾನಿಗೆ ಒಳಗಾಗಿವೆ. ಅನಧೀಕೃತ ಮನೆಗಳ ಬಗ್ಗೆಯೂ ನಮ್ಮ ಸರ್ಕಾರ ಸಾಕಷ್ಟು ಉದಾರವಾಗಿಯೇ ನಡೆದುಕೊಳ್ಳುತ್ತಿದ್ದು, ಮನೆಹಾನಿಯಾದ ಎಲ್ಲರಿಗೂ ಈಗಾಗಲೇ ಪರಿಹಾರ ಒದಗಿಸಲಾಗಿದೆ.

ಮನೆ ಸಂಪೂರ್ಣ ಹಾನಿಯಾದರೆ 1,20,000 ರೂಪಾಯಿಯ ಜೊತೆಗೆ ಸರ್ಕಾರದಿಂದಲೇ ಒಂದು ಮನೆಯನ್ನೂ ನೀಡಲಾಗುತ್ತಿದೆ. ಈ ಕಾರ್ಯಗಳಿಗೆ ಈವರೆಗೆ ಒಟ್ಟು 9.21ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಮನೆಗೆ ನೀರು ನುಗ್ಗಿ ಸಣ್ಣಪುಟ್ಟ ಹಾನಿಯಾಗಿದ್ದರೆ ಅದನ್ನು ಸುಧಾರಿಸಲು 2800 ಮನೆಗಳಿಗೆ 70 ಲಕ್ಷ ಹಣ ಪರಿಹಾರ ನೀಡಲಾಗಿದೆ. ದಿನಬಳಕೆ ವಸ್ತುಗಳಿಗೂ 70 ಲಕ್ಷ ಪರಿಹಾರ ಸೇರಿ ಒಟ್ಟಾರೆ 1.40 ಕೋಟಿ ರೂ ಪರಿಹಾರ ನೀಡಲಾಗಿದೆ. ಅನದೀಕೃತ ಮನೆಗಳಿಗೆ ಹಾನಿಯಾಗಿದ್ರೆ ಅವರಿಗೂ 1 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗಿದೆ. ಮನೆ ಭಾಗಶಃ ಹಾನಿಯಾಗಿದ್ದರೆ ಎಸ್‍ಡಿಆರ್‍ಎಫ್ ನಿಯಮದ ಅಡಿಯಲ್ಲಿ ಕೇವಲ 2,500 ರೂಪಾಯಿ ಮಾತ್ರ ಪರಿಹಾರ ನೀಡಲು ಸಾಧ್ಯ. ಆದರೆ, ರಾಜ್ಯ ಸರ್ಕಾರದ ವತಿಯಿಂದ 50,000 ವರೆಗೆ ಪರಿಹಾರ ನೀಡಲಾಗಿದೆ.

ಇನ್ನೂ ರಾಜ್ಯಾದ್ಯಂತ ಹಸು-ದನ ಸೇರಿದಂತೆ 151ದೊಡ್ಡ ಜಾನುವಾರುಗಳು ಹಾಗೂ 137 ಚಿಕ್ಕ ಜಾನುವಾರುಗಳು ಮೃತಪಟ್ಟಿವೆ. ಇದಕ್ಕೂ ಸಹ 52.98 ಲಕ್ಷ ರೂಪಾಯಿ ಪರಿಹಾರ ಪಾವತಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 667 ಕೋಟಿ ರೂಪಾಯಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲೂ ಸಹ ರಾಜ್ಯ ಸರ್ಕಾರ ಸಿದ್ದವಾಗಿದೆ ಎಂದು ಅವರು ತಿಳಿಸಿದ್ದಾರೆ.

TAGGED:bengalurucongressfarmersKrishna ByregowdaPodi Campaignvidhana soudha
Share This Article
Facebook Whatsapp Whatsapp Telegram

Cinema Updates

Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood
Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories

You Might Also Like

Odisha Congress Student Union President Arrest
Crime

ಒಡಿಶಾ ಹೋಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ – ಕಾಂಗ್ರೆಸ್ ಸ್ಟೂಡೆಂಟ್ ಲೀಡರ್ ಅರೆಸ್ಟ್

Public TV
By Public TV
55 seconds ago
Hasan Solapur Train
Districts

ಹಾಸನ – ಸೋಲಾಪುರ ರೈಲಿನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

Public TV
By Public TV
7 minutes ago
Stalin
Latest

ತಮಿಳುನಾಡು ಸಿಎಂ ಸ್ಟಾಲಿನ್‌ ಆಸ್ಪತ್ರೆಗೆ ದಾಖಲು

Public TV
By Public TV
58 minutes ago
BENGALURU CRIME
Bengaluru City

ನಮ್ಮ ಹುಡ್ಗಿ ತಂಟೆಗೆ ಬಂದ್ರೆ ಮುಗ್ಸಿ ಬಿಡ್ತೀನಿ – ಲಾಂಗ್ ಹಿಡಿದು ರೌಡಿಶೀಟರ್ ಪುಂಡಾಟ

Public TV
By Public TV
1 hour ago
Gambling
Crime

ಕಲಬುರಗಿ | ಜೂಜಾಡುತ್ತಿದ್ದ ಕಾಂಗ್ರೆಸ್, ಬಿಜೆಪಿ ಮುಂಖಂಡರ ಸಹಿತ 7 ಮಂದಿ ಅರೆಸ್ಟ್

Public TV
By Public TV
2 hours ago
Biklu Shiva Murder Case
Bengaluru City

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ – ಮತ್ತೆ ಮೂವರು ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?