ತುಮಕೂರು: ಸುಲ್ವಾಡಿ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆತಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದ್ದು, ವಿಧಿವಿಜ್ಞಾನದ ಪ್ರಯೋಗದ ವರದಿ ನಂತರ ಕ್ರಮ ಕೈಗೊಳ್ಳಲಾಗುತ್ತದೆಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.
Advertisement
ನಗರದಲ್ಲಿಂದು ಸ್ಮಾರ್ಟ್ ಸಿಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆ ಸುಲ್ವಾಡಿ ಗ್ರಾಮದ ಮಾರಮ್ಮ ದೇವಿ ದೇವಸ್ಥಾನದ ಪ್ರಸಾದದಲ್ಲಿ ವಿಷಕಾರಿ ಅಂಶ ಬೆರೆತಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ. ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪ್ರಸಾದದ ಮಾದರಿಯನ್ನು ಕಳುಹಿಸಲಾಗಿದೆ. ವಿಷಕಾರಿ ಅಂಶ ಪ್ರಸಾದದಲ್ಲಿ ಇದೆ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಯೋಗಾಲಯದಿಂದ ವರದಿ ಬಂದ ಬಳಿಕ ವಿಚಾರ ಗೊತ್ತಾಗಲಿದೆ ಎಂದು ಹೇಳಿದರು.
Advertisement
ದೇವಾಲಯಗಳಲ್ಲಿ ಅನ್ನ ಸಂತರ್ಪಣೆಯನ್ನು ನಿಯಂತ್ರಿಸುವುದು ಕಷ್ಟ. ಈ ಕುರಿತು ಕಾನೂನು ತರುವುದು ತುಂಬಾ ಕಷ್ಟ. ನಿಯಂತ್ರಣ ಮಾಡುವುದಕ್ಕೆ ಹೋದರೆ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಆದರೂ ಈ ಕುರಿತು ಮುಂದಿನ ದಿನದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಇದೇ ವೇಳೆ ರಫೇಲ್ ಡೀಲ್ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿಲ್ಲ. ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಹಾಕಲು ಒತ್ತಾಯ ಹೆಚ್ಚಾಗಿದೆ. ಈಗಾಗಲೇ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಪ್ರಕಟಣೆ ಮಾಡಿದೆ. ಸುಪ್ರೀಂ ಯಾವ ಕಾರಣಕ್ಕಾಗಿ ಈ ರೀತಿ ಆದೇಶ ಕೊಟ್ಟಿದ್ದಾರೆ ಅನ್ನುವುದು ಗೊತ್ತಿಲ್ಲ. ಬಹುಶಃ ಸಾಕ್ಷಾಧಾರ ಸರಿಯಿಲ್ಲ ಎಂಬ ಕಾರಣನೋ ಅಥವಾ ಬೇರೆ ಕಾರಣಕ್ಕೋ ಈ ರೀತಿ ತೀರ್ಪು ಕೊಟ್ಟಿರಬಹುದು ಎಂದರು. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com