ಬೆಂಗಳೂರು: ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದ್ದು, ಈ ತರಕಾರಿ ತಿಂದ್ರೆ ಕಿಡ್ನಿ, ಮೆದುಳಿಗೆ ಸಮಸ್ಯೆಯಾಗುತ್ತದೆ. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ ಮಾರುಕಟ್ಟೆಗಳಲ್ಲಿ ಕಂಡುಬರುವ ತರಕಾರಿಗಳಲ್ಲಿ ಸೀಸದ ಪ್ರಮಾಣ ಮಿತಿಗಿಂತ ಹೆಚ್ಚು ಮಟ್ಟದಲ್ಲಿದೆ. ಇದನ್ನೂ ಓದಿ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು
ಕಳೆದ ವರ್ಷ ಸಂಗ್ರಹಿಸಲಾದ 72 ತರಕಾರಿ ಮಾದರಿಗಳ ಸಮಗ್ರ ವಿಶ್ಲೇಷಣೆಯ ನಂತರ ಹೆಚ್ಚಿನ ಪ್ರಮಾಣದ ಸೀಸದ 19 ಮಾದರಿಗಳು ಪತ್ತೆಯಾಗಿದೆ. ಸೋರೆಕಾಯಿಯಲ್ಲಿ ಗಮನಿಸಲಾದ ಸೀಸದ ಸಾಂದ್ರತೆಯು 1.75ಎಂಜಿ/ಕೆಜಿ ಪತ್ತೆಯಾಗಿದೆ. ತರಕಾರಿ ಬೆಳೆಯುವ ಮಣ್ಣು ಕೂಡ ಪರೀಕ್ಷೆಗೆ ಒಳಪಡಿಸಿದಾಗ ಕೀಟನಾಶಕ ಅಂಶ ಪತ್ತೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ನೆಲಮಂಗಲದ ಹೊಲಗಳಿಂದ 23 ಮಾದರಿ ಮಣ್ಣು ಪರೀಕ್ಷೆ ಮಾಡಲಾಗಿದ್ದು, ಈ ಸಂಗ್ರಹವಾದ ಮಣ್ಣು ಕೂಡ ಕಲುಷಿತ ಎಂದು ತಿಳಿದುಬಂದಿದೆ.
ನಗರದ ತರಕಾರಿಗಳಲ್ಲಿ ಅಪಾಯಕಾರಿ ಅಂಶಗಳ ಬಗ್ಗೆ ಜನರ ದೂರು ನೀಡಿದ್ದರು. ಈ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಜಂಟಿ ಸಮಿತಿ ಜಂಟಿಯಾಗಿ ವರದಿ ಸಲ್ಲಿಸಿದ್ದು, ವರದಿಯಲ್ಲಿ ಆತಂಕಕಾರಿ ಅಂಶ ಬೆಳಕಿಗೆ ಬಂದಿದ್ದು, ತರಕಾರಿಯಲ್ಲಿ ಕಲುಷಿತ ಅಂಶವಿದೆ ಎಂಬುದು ದೃಢವಾಗಿದೆ.ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

