ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಡೆಯುತ್ತಿರುವ ರಾಜಕೀಯ ತಿಕ್ಕಾಟದಿಂದ ಸಂಕಷ್ಟ ಅನುಭವಿಸುತ್ತಿರುವ ಪಿಒಕೆಯ ಮುಜಾಫರಾಬಾದ್‍ನಲ್ಲಿರುವ ನಾಗರಿಕರೊಬ್ಬರು ಭಾರತದ ಸಹಾಯವನ್ನು ಕೇಳಿದ್ದಾರೆ.
ಮೊಹ್ಸಿನ್ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಜಿಲ್ಲೆಯ ಪ್ರಜೆ. ಇವರು ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ದೇಶದ ಸಾಮಾನ್ಯ ಜನರ ಕಷ್ಟಗಳ ಬಗ್ಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಶಾಂತಿಯಿಂದ ಅನೇಕ ಕಷ್ಟಗಳು ಉಂಟಾಗುತ್ತಿದೆ. ಇದರಿಂದಾಗಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಸಹಾಯ ಮಾಡುವಂತೆ ಭಾರತಕ್ಕೆ ಮನವಿ ಮಾಡಿದ್ದಾರೆ.
Advertisement
Advertisement
ವೀಡಿಯೋದಲ್ಲಿ ಏನಿದೆ?:
ಮೊಹ್ಸಿನ್ ಹೇಳಿರುವ ಪ್ರಕಾರ ಪಾಕಿಸ್ತಾನದ ಸೇನೆಯು ದೇಶದ ಜನರನ್ನು ಅಗೌರವದಿಂದ ನೋಡುತ್ತಿದೆ. ತಾನು ಪ್ರಸ್ತುತ ದುಬೈನಲ್ಲಿದ್ದೇನೆ. ಆದರೆ ತನ್ನ ಮಗನು ಅನಾರೋಗ್ಯದಿಂದ ಬಳಲುತ್ತಿದ್ದನು. ಇದರಿಂದಾಗಿ ತನ್ನ ಪತ್ನಿ ಆತನನ್ನು ಪಿಒಕೆಯ ಆಸ್ಪತ್ರೆಗ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಲು ತಿಳಿಸಿದ್ದಾರೆ. ಸಿಟಿ ಸ್ಕ್ಯಾನ್ ಕೊಠಡಿಯ ಉಸ್ತುವಾರಿ ವಹಿಸಿದ್ದ ತಯ್ಯಬ್ ಎಂಬ ಮಿಲಿಟರಿ ಅಧಿಕಾರಿ ತನ್ನ ಪತ್ನಿಯನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಲ್ಲೆ ನಡೆಸಿದ್ದಾರೆ.
Advertisement
We demand #India to come & rescue us, India is much better than #Pakistan. ???? Says a citizen of Muzaffarabad. If Tayyab of CT Scan dept in Army run Muzaffarabad CMH hospital is not arrested, it will prove army is systematically disgracing our women folk. ????We stand with Mohsin. pic.twitter.com/L9Z9Mkdrvd
— Prof. Sajjad Raja (@NEP_JKGBL) April 6, 2022
ಮಹಿಳೆಯರಿಗೆ ಗೌರವ ಸಿಗದ ದೇಶದಿಂದ ಅವರನ್ನು ರಕ್ಷಿಸಬೇಕಾಗಿದೆ. ಅಷ್ಟೇ ಅಲ್ಲದೇ ಪಾಕಿಸ್ತಾನವು ತನ್ನ ನಾಗರಿಕರಿಗೆ ಉದ್ಯೋಗ ಮತ್ತು ಸುರಕ್ಷತೆಯನ್ನು ನೀಡುತ್ತಿಲ್ಲ. ಹೀಗಾಗಿ ಅನೇಕರು ಭಾರತಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್
Advertisement
ಈ ವೀಡಿಯೋವನ್ನು ಮೊಹ್ಸಿನ್ ಹಂಚಿಕೊಂಡಿದ್ದು, ಹಲವಾರು ಪಾಕಿಸ್ತಾನಿ ಪ್ರಜೆಗಳು ಮರು ಹಂಚಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ಲವ್ ಜಿಹಾದ್ ಕೇಸ್‍ಗೆ ಟ್ವಿಸ್ಟ್ – ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ ಅಂದ ಯುವತಿ