ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರದ (POK) ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ (Female Students) ಹಾಗೂ ಮಹಿಳಾ ಶಿಕ್ಷಕಿರಿಗೆ (Teachers) ಹಿಜಬ್‍ನ್ನು (Hijab) ಅಲ್ಲಿನ ಸರ್ಕಾರ ಕಡ್ಡಾಯಗೊಳಿಸಿದೆ.
ಸ್ಥಳೀಯ ಆಡಳಿತದ ಈ ಅಧಿಸೂಚನೆಯನ್ನು ಹೊರಡಿಸಿದೆ. ಇದರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರು ಹಿಜಬ್ ಧರಿಸುವುದು ಕಡ್ಡಾಯವಾಗಿದೆ. ಆದೇಶ ಉಲ್ಲಂಘಿಸಿದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಈ ಕ್ರಮಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ. ಸ್ಥಳೀಯ ಪತ್ರಕರ್ತೆಯೊಬ್ಬರು ಈ ಬಗ್ಗೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಅವರು ಧರಿಸುವುದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪಾಕಿಸ್ತಾನವು ತೀವ್ರ ಆರ್ಥಿಕ ಪರಿಸ್ಥಿತಿಯಿಂದ ಬಳಲುತ್ತಿದೆ. ಅದರಲ್ಲೂ ಮುಜಾಫರಾಬಾದ್ ಸೇರಿದಂತೆ ಪಿಒಕೆಯ ವಿವಿಧ ಭಾಗಗಳಲ್ಲಿ ಅನೇಕ ಕುಟುಂಬಗಳು ತೀರಾ ಬಡತನದಲ್ಲಿದ್ದು, ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿತ್ತು. ಇದನ್ನೂ ಓದಿ: ನಾಪತ್ತೆಯಾಗಿದ್ದ ಮಾಡಾಳ್ ಮನೆಗೆ ವಾಪಸ್ – ತೆರೆದ ವಾಹನದಲ್ಲಿ ಮೆರವಣಿಗೆ