ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು 4ನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ದರ್ಶನ್ ಸ್ನೇಹಿತ ಆಂಟೋನಿ ರಾಯ್ ಕಾರನ್ನು ಚಾಲನೆ ಮಾಡುತ್ತಿದ್ದರು ಎನ್ನುವ ಅಂಶ ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಎಂದು ಮೈಸೂರಿನ ವಿವಿ ಪುರಂ ಸಂಚಾರಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಚಾರ್ಜ್ ಶೀಟ್ ನಲ್ಲಿನ ಅಂಶಗಳು?
ಸೆಪ್ಟೆಂಬರ್ 23ರಂದು ದರ್ಶನ್ ಕಾರು ಅಪಘಾತವಾಗಿತ್ತು. ಆ ಕಾರನ್ನು ಅವರ ಸ್ನೇಹಿತ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ಮೈಸೂರು ರಿಂಗ್ ರಸ್ತೆಯ ಜಂಕ್ಷನ್ ಬಳಿ ಆಂಟೋನಿ ರಾಯ್ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದಿತ್ತು.
ಈ ಅಪಘಾತದಲ್ಲಿ ಕಾರಿನಲ್ಲಿದ್ದ 5 ಮಂದಿಗೆ ಗಾಯಗಳಾಗಿ ಚಿಕಿತ್ಸೆ ಪಡೆದಿದ್ದರು. ಆ ಸಮಯದಲ್ಲಿ ದರ್ಶನ್ ಅವರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯವಾಗಿದ್ದು, ಅವರು ಸಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಕಾರನ್ನು ಸರ್ಕಾರಿ ಆರ್ ಟಿಓ ಅಧಿಕಾರಿಗಳು ಪರಿಶೀಲಿಸಿ ಯಾವುದೇ ತಾಂತ್ರಿಕ ಕಾರಣದಿಂದ ಅಪಘಾತ ಆಗಿಲ್ಲ ಎಂದು ವರದಿ ನೀಡಿದ್ದಾರೆ. ಘಟನೆ ಸಂಬಂಧ ನಟರಾದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್, ಚಾಲಕ ಆಂಟೋನಿ ರಾಯ್ ಹಾಗೂ ಕಾರಿನಲ್ಲಿದ್ದ ಪ್ರಕಾಶ್ ಎಂಬವವರ ಹೇಳಿಕೆಗಳನ್ನು ಪಡೆಯಲಾಗಿದೆ. ಎಲ್ಲರ ಹೇಳಿಕೆಯಲ್ಲೂ ಆಂಟೋನಿ ರಾಯ್ ರವರ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣವೆಂಬ ಸಹಜ ಅಭಿಪ್ರಾಯ ವ್ಯಕ್ತವಾಗಿದೆ ಎನ್ನುವ ಅಂಶ ಚಾರ್ಜ್ ಶೀಟ್‍ನಲ್ಲಿ ಉಲ್ಲೇಖವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv