ಬೆಂಗಳೂರು: ರಾಮೇಶ್ವರ ಕೆಫೆ (Rameshwaram Cafe) ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ (Suspected Terrorist) ಜಾಡು ಪತ್ತೆ ಹಚ್ಚಲು ಪೊಲೀಸರು ಬಿಎಂಆರ್‌ಸಿಎಲ್ (BMRCL) ಮೊರೆ ಹೋಗಿದ್ದಾರೆ.
ಶಂಕಿತ ಉಗ್ರ ಮೆಟ್ರೋ ಸ್ಟೇಷನ್ ಮುಂಭಾಗ ಓಡಾಡಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆ ಬಿಎಂಆರ್‌ಸಿಎಲ್‌ನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಮೆಟ್ರೋ ಕಡೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪಡೆದುಕೊಂಡಿದ್ದಾರೆ. ಕುಂದಲಹಳ್ಳಿ, ಹೂಡಿ, ಸೀತಾರಾಮ ಪಾಳ್ಯ, ಮೆಟ್ರೋ ಸ್ಟೇಷನ್ ಮುಂಭಾಗದ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಶಿವರಾತ್ರಿ ದಿನ ಮತ್ತೆ ರಾಮೇಶ್ವರಂ ಕೆಫೆ ತೆರೆಯುತ್ತೇವೆ: ಮಾಲೀಕ ರಾಘವೇಂದ್ರ ರಾವ್
Advertisement
Advertisement
ಬಿಎಂಟಿಸಿಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದ ಬಳಿಕ ಶಂಕಿತ ಆರೋಪಿ ಮೆಟ್ರೋ ಸ್ಟೇಷನ್ ಮುಂಭಾಗ ಓಡಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಘಟನೆ ನಡೆದ ಹಿಂದಿನ ದಿನದ ವಿಷ್ಯುವಲ್ಸ್ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ಯಾಮಾರಿಸಲು ಶರ್ಟ್, ಪ್ಯಾಂಟ್ ಬದಲಿಸಿ ಹೋದ ಶಂಕಿತ