ಬೆಂಗಳೂರು: ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಸನಾ(28), ನಯಾಜ್(30), ಇಬ್ರಾಹಿಂ(32) ಬಂಧಿತ ಆರೋಪಿಗಳು. ಇವರನ್ನು ಏರ್‍ಪೋರ್ಟ್ ರಸ್ತೆಯ ನವಯುಗ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಬಳ್ಳಾರಿಯಿಂದ ಶಿವಾಜಿನಗರಕ್ಕೆ ಗೋವುಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ತಡ ರಾತ್ರಿಯಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 18 ಗೋವುಗಳನ್ನು ರಕ್ಷಿಸಿ ದೇವನಹಳ್ಳಿಯ ವಿಜಯಪುರ ಗೋಶಾಲೆಗೆ ರವಾನೆ ಮಾಡಲಾಗಿದೆ.
ಘಟಬೆ ಸಂಬಂಧ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.