ಬೆಂಗಳೂರು: ಕೊಲ್ಹಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದನ್ನು ಖಂಡಿಸೋ ಭರದಲ್ಲಿ ಬೆಂಗಳೂರಿನ ಸದಾಶಿವನಗರದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಧೀರ ಪಡೆಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಉಳಿದ 6 ಜನರಿಗಾಗಿ ಶೋಧ ಮುಂದುವರಿದಿದೆ. ಡಿಸೆಂಬರ್ 17ರಂದು ಡಸ್ಟರ್ ಕಾರ್‌ನಲ್ಲಿ 6, ಆಟೋ, ಬೈಕ್‍ನಲ್ಲಿ 7 ಜನ ಬಂದು ಸ್ಯಾಂಕಿಕೆರೆ ಸಿಗ್ನಲ್ ಬಳಿ ಇರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಬಳಿಕ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ್ಯಾಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ
Advertisement
Advertisement
ಈ ನಡುವೆ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳದ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಶಿವಾಜಿ ಪ್ರತಿಮೆಗೆ ಮಸಿ ಬಳಿದವರ ಮೇಲೆ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿಗರ ಮೇಲೆ ಕನ್ನಡಿಗರು ದೌರ್ಜನ್ಯ ಮಾಡುತ್ತಿದ್ದಾರೆ ಹೀಗಾಗಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
Advertisement