ನವದೆಹಲಿ: ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಕೊಲೆ ಬೆದರಿಕೆ ಸಂದೇಶ ಬರೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
#WATCH | Police arrest accused Ankit Goyal, 33 for writing death-threatening graffiti against Delhi CM Arvind Kejriwal at a metro station. The Metro Unit of Delhi Police had registered an FIR and was investigating the matter: Delhi Police
(CCTV visuals confirmed by Police) pic.twitter.com/p0Z8D1h16c
— ANI (@ANI) May 22, 2024
Advertisement
ಬಂಧಿತನನ್ನು 33 ವರ್ಷದ ಆರೋಪಿ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ. ಈತ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆದಿದ್ದನು. ಅಂಕಿತ್ ಕೃತ್ಯ ಮೆಟ್ರೋ ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಾಕ್ಷಿ ಆಧರಿಸಿ ದೆಹಲಿ ಪೊಲೀಸರು ಬಂಧಿಸಿದ್ದು, ಮೆಟ್ರೋ ಘಟಕವು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್ ಬಾಯ್ – ಮುಂದಾಗಿದ್ದೇನು ಗೊತ್ತೇ?
Advertisement
ಮೂಲಗಳ ಪ್ರಕಾರ ಆರೋಪಿ ಬರೇಲಿ ನಿವಾಸಿಯಾಗುದ್ದು, ಉನ್ನತ ಶಿಕ್ಷಣ ಪಡೆದಿದ್ದಾನೆ. ಅಲ್ಲದೇ ಹೆಸರಾಂತ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆರೋಪಿಯು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ತೋರುತ್ತದೆ, ಆದರೆ ವೈದ್ಯಕೀಯ ಪರೀಕ್ಷೆಯ ನಂತರವೇ ಇದನ್ನು ಖಚಿತಪಡಿಸಬಹುದಾಗಿದೆ ಎನ್ನಲಾಗಿದೆ.
Advertisement
दिल्ली के मुख्यमंत्री अरविंद केजरीवाल जी को सरेआम दी जा रही जान से मारने की धमकी ‼️
PMO, BJP और नरेंद्र मोदी के इशारे पर राजीव चौक, पटेल नगर मेट्रो स्टेशन पर लिखी गई धमकी।
अरविंद केजरीवाल जी को कुछ भी होता है तो इसके लिए सीधे तौर पर बीजेपी और नरेंद्र मोदी ज़िम्मेदार होंगे। pic.twitter.com/vbbybDFSfJ
— AAP (@AamAadmiParty) May 20, 2024
Advertisement
ಈ ಹಿಂದೆ ಬೆದರಿಕೆ ಸಂದೇಶ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಎಎಪಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಪಿಎಂಒ, ಬಿಜೆಪಿ ಮತ್ತು ನರೇಂದ್ರ ಮೋದಿಯವರ ಆದೇಶದ ಮೇರೆಗೆ ರಾಜೀವ್ ಚೌಕ್, ಪಟೇಲ್ ನಗರ ಮೆಟ್ರೋ ನಿಲ್ದಾಣದಲ್ಲಿ ಬೆದರಿಕೆ ಸಂದೇಶ ಬರೆಯಲಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿ ಮತ್ತು ನರೇಂದ್ರ ಮೋದಿ ನೇರ ಹೊಣೆಯಾಗುತ್ತಾರೆ ಎಂದು ಗಂಭೀರ ಆರೋಪ ಮಾಡಿತ್ತು.