ಬೆಂಗಳೂರು: ಕೇರಳದ ಕಾಸರಗೋಡು ಮೂಲದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಗಳಿಗೆ ಉಳಿದುಕೊಳ್ಳಲು ಜಾಗ ಕೊಟ್ಟಿದ್ದ ಮನೆ ಮಾಲೀಕ ಅನ್ಸರ್ ಅಲಿಯಾಸ್ ನಾಸೀರ್ ಬಂಧನವಾಗಿದೆ. ಈತ ಕೂಡಾ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಒತ್ತಾಯ ಮಾಡುತ್ತಿದ್ದನು ಎಂಬ ಮಾಹಿತಿ ತಿಳಿದು ಬಂದಿದೆ.
ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಅನ್ಸರ್, ಕೇರಳ ಮೂಲದ ಇಬ್ಬರು ಆರೋಪಿಗಳು, ಯುವತಿಯನ್ನು ನಗರಕ್ಕೆ ಕರೆದುಕೊಂಡು ಬಂದು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದರು. ನಂತರ ಮತಾಂತರಗೊಳ್ಳುವಂತೆ ಕಿರುಕುಳ ನೀಡಿದ್ದರು ಎಂದು ಯುವತಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.
ಕುಟುಂಬ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಗರದ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು. ಸಂಸದೆ ಶೋಭಾ ಅವರು ಕೂಡ ಯುವತಿಯ ಪರವಾಗಿ ಧ್ವನಿ ಎತ್ತಿದ್ದರು.