ರಾತ್ರೋರಾತ್ರಿ ಜೆಡಿಎಸ್ ಮುಖಂಡನ ಬಂಧನ, ಬಿಡುಗಡೆ

Public TV
1 Min Read
ALFAN KHAN 1

ಬೆಂಗಳೂರು: ಜೆಡಿಎಸ್ ಮುಖಂಡ ಅಲ್ತಾಫ್ ಖಾನ್ ರಾತ್ರೋರಾತ್ರಿ ಬಂಧನವಾಗಿ ಜಾಮೀನಿನ ಮೇಲೆ ರಿಲೀಸ್ ಆಗಿದ್ದಾರೆ.

ಹೋಟೆಲ್‍ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಉಪ್ಪಾರಪೇಟೆ ಪೊಲೀಸರು ತಡರಾತ್ರಿ ಅಲ್ತಾಫ್ ಖಾನ್ ನನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ಅಲ್ತಾಫ್ ಖಾನ್ ಜಾಮೀನು ಪಡೆದು ರಿಲೀಸ್ ಆಗಿದ್ದಾರೆ ಎಂದು ಅಲ್ತಾಫ್ ಖಾನ್ ಬೆಂಬಲಿಗರಿಂದ ಮಾಹಿತಿ ತಿಳಿದು ಬಂದಿದೆ.

UPPERPETE

ಅಲ್ತಾಫ್ ಖಾನ್ ಹೋಟೆಲ್ ಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸರಿಂದ ತಡರಾತ್ರಿ ಠಾಣೆಗೆ ಕರೆಸಿ ಅಲ್ತಾಫ್ ವಿಚಾರಣೆ ನಡೆಸಿದ್ದಾರೆ. ಬಳಿಕ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ್ದು, ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲೇ ಬೇಲ್ ಪಡೆದು ಅಲ್ತಾಫ್ ಖಾನ್ ರಿಲೀಸ್ ಆಗಿದ್ದಾರೆ.

ಅಲ್ತಾಫ್ ಖಾನ್ ಬಂಧನದ ಹಿಂದೆ ಮೈತ್ರಿ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದು ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಭಾವಿ ಸಚಿವರ ಕೈವಾಡದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಅಲ್ತಾಪ್ ಖಾನ್ ಬೆಂಬಲಿಗರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *