ಬೆಂಗಳೂರು: ದೇವನಹಳ್ಳಿಯ ಟೋಲ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 223 ಕೆಜಿ ಗಾಂಜಾವನ್ನು ಮಾದಕವಸ್ತು ನಿಯಂತ್ರಣ ವಿಭಾಗಾಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ನೋಂದಣಿ ಹೊಂದಿದ್ದ ಕಾರಿನಲ್ಲಿ ಮೂವರು ವ್ಯಕ್ತಿಗಳು ಗಾಂಜಾವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಪಡೆದ ಮಾದಕವಸ್ತು ನಿಯಂತ್ರಣ ಅಧಿಕಾರಿಗಳು ದೇವನಹಳ್ಳಿ ಟೋಲ್ ಬಳಿ ದಾಳಿ ನಡೆಸಿ, ಕಿಂಗ್ ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 223 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಕೊಂಡಿದ್ದಾರೆ. ಬಂಧಿತರು ಕರ್ನಾಟಕ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಗಾಂಜಾ ಸಪ್ಲೈ ಮಾಡುತ್ತಿದ್ದ ಕಿಂಗ್ ಪಿನ್ ಗಳೆಂದು ತಿಳಿದು ಬಂದಿದೆ.
Advertisement
ಆರೋಪಿಗಳು ವಿಶಾಖಪಟ್ಟಣಂನಿಂದ ಮಹಾರಾಷ್ಟ್ರಕ್ಕೆ ಬೆಂಗಳೂರು ಮಾರ್ಗವಾಗಿ ಗಾಂಜಾ ಸಾಗಿಸುತ್ತಿದ್ದರು. ತೆಲಂಗಾಣದಲ್ಲಿ ಚುನಾವಣೆ ನಿಮಿತ್ತ ಬಿಗಿಭದ್ರತೆ ಕೈಗೊಳ್ಳಲಾಗಿತ್ತು. ಹೀಗಾಗಿ ಆರೋಪಿಗಳು ಬೆಂಗಳೂರು ಮಾರ್ಗವಾಗಿ ಸಾಗಿಸುವ ಯತ್ನ ಮಾಡಿದ್ದರು ಎನ್ನಲಾಗುತ್ತಿದೆ.
Advertisement
ಘಟನೆ ಸಂಬಂಧ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews