ಕಲಬುರಗಿ: ತಲ್ವಾರ್ ನಿಂದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಿಸಿಕೊಂಡ ಯುವಕನನ್ನು ಪೊಲೀಸರು ಜೈಲಿಗಟ್ಟಿ ಕಂಬಿ ಎಣಿಸುವಂತೆ ಮಾಡಿದ್ದಾರೆ.
ಜಿಲ್ಲೆಯ ಕಮಲಾಪುರ ಪಟ್ಟಣದ ನಿವಾಸಿ ಸೈಯದ್ ಇಮ್ರಾನ್ ನಾಗೂರೆ ತಲ್ವಾರ್ ನಿಂದ ಕೇಕ್ ಕತ್ತರಿಸುವ ಮೂಲಕ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಜನವರಿ 1ರಂದು ಸೈಯದ್‍ನ ಹುಟ್ಟುಹಬ್ಬವಿತ್ತು. ಆದ್ದರಿಂದ ಸ್ನೇಹಿತರ ಜೊತೆ ಸೇರಿ ತಲ್ವಾರ್ ನಿಂದ ಕೇಕ್ ಕತ್ತರಿಸಿ ಖುಷಿಪಟ್ಟಿದ್ದಾನೆ. ಅಲ್ಲದೆ ಕಾರ್ಯಕ್ರಮಕ್ಕೆ ಬಂದವರ ಕೈಯಲ್ಲಿ ಕೂಡ ಶಸ್ತ್ರಾಸ್ತ್ರ ಕೊಟ್ಟು ಪುಂಡತನ ಮೆರೆದಿದ್ದಾನೆ. ಇದನ್ನೂ ಓದಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಜೆಡಿಎಸ್ ಮುಖಂಡನ ಹುಟ್ಟುಹಬ್ಬ ಆಚರಣೆ
ಇತ್ತೀಚೆಗೆ ಈ ರೀತಿಯ ವಿಕೃತವಾಗಿ ಮಾರಕಾಸ್ತ್ರಗಳನ್ನು ಬಳಸಿ ಹುಟ್ಟುಹಬ್ಬಗಳನ್ನು ಆಚರಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೆ ಇವರು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ತಿಳಿಯುತಿದ್ದಂತೆ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಈ ಘಟನೆ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾನು ಮಾಡಿದ ಪುಂಡತನಕ್ಕೆ ಜೈಲು ಕಂಬಿ ಎಣಿಸುತ್ತಾ ಕುಳಿತಿದ್ದಾನೆ.
ಈ ಹಿಂದೆ ಕೂಡ ಹಲವು ಮಂದಿ ಹೀಗೆ ತಲ್ವಾರ್ ನಿಂದ ಕೇಕ್ ಕತ್ತರಿಸಿ ವಿಕೃತವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗೆ ಮಾಡುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ರೌಡಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದ್ದಾರೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದನ್ನು ನೋಡಿ ಮುಂದಿನ ಯುವಪೀಳಿಗೆ ಕೂಡ ಇದನ್ನೇ ಪಾಲಿಸುತ್ತದೆ ಎಂದು ಆರೋಪಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv