ಮಡಿಕೇರಿ: ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
Advertisement
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ರಾಜೇಶ್, ಕರಿಯ, ಸೂರ್ಯ, ಕೃಷ್ಣ ಬಂಧಿತ ಆರೋಪಿಗಳು. ಇದನ್ನೂ ಓದಿ: ಇನ್‍ಸ್ಟಾದಲ್ಲಿ ಆರಂಭ ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್
Advertisement
Advertisement
ಹೆದ್ದಾರಿ ಬದಿಯಲ್ಲಿ ಅಕ್ರಮವಾಗಿ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಐಡಿ ಪೊಲೀಸ್ ಅರಣ್ಯ ಘಟಕ ಸಿಬ್ಬಂದಿಗಳು ಚಿಪ್ಪುಹಂದಿ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ನಿರ್ದೇಶನದಲ್ಲಿ ಮಡಿಕೇರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಇವರ ಜೊತೆಗೆ ಅರಣ್ಯ ಸಂಚಾರಿ ದಳದ ಪಿಎಸ್‍ಐ ಸಿ.ಯು.ಸವಿ, ಹೆಡ್‍ಕಾನ್ಸ್‌ಟೇಬಲ್‍ಗಳಾದ ಶೇಖರ್, ರಾಜೇಶ್, ಯೋಗೇಶ್, ಮತ್ತು ಕಾನ್ಸ್‌ಟೇಬಲ್‍ಗಳಾದ ಸ್ವಾಮಿ, ಮಂಜುನಾಥ್ ಹಾಜರಿದ್ದರು. ಇದನ್ನೂ ಓದಿ: ಕುಡಿದು ಡ್ಯಾನ್ಸ್ ಮಾಡುತ್ತ ಮೈಮರೆತ ವರ – ಬೇರೆಯವರನ್ನ ಮದುವೆಯಾದ ವಧು